ಮುಂಡರಗಿ: ವಿವಿಧ ಬೆಳೆಗಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಆಗ್ರಹಿಸಿ ತಾಲ್ಲೂಕಿನ ನೂರಾರು ರೈತರು ಮಂಗಳವಾರ ತಹಶೀಲ್ದಾರ್ ಕಾರ್ಯಾಲಯ ಎದುರಿನ ರಾಜ್ಯ ಹೆದ್ದಾರಿ ಮೇಲೆ ಧರಣಿ ನಡೆಸಿದರು.

ಕೋಟೆ ಆಂಜನೇಯ ದೇವಸ್ಥಾನದಿಂದ ಟ್ರ್ಯಾಕ್ಟರ್ಗಳ ಮೂಲಕ ಬೃಹತ್ ಪ್ರತಿಭಟನೆ ಆರಂಭಿಸಿದ ರೈತರು ಜಾಗೃತ ವೃತ್ತ, ಗಾಂಧೀ ವೃತ್ತ, ಅಂಬಾ ಭವಾನಿ ನಗರ, ಕೇಂದ್ರ ಬಸ್ ನಿಲ್ದಾಣ, ಕೊಪ್ಪಳ ವೃತ್ತ ಮಾರ್ಗವಾಗಿ ಸಂಚರಿಸಿ ತಹಶೀಲ್ದಾರ್ ಕಾರ್ಯಾಲಯ ಎದುರು ಧರಣಿ ಆರಂಭಿಸಿದರು.

ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ, ಈರುಳ್ಳಿ, ಭತ್ತ, ತೊಗರಿ, ಶೇಂಗಾ ಮೊದಲಾದ ಬೆಳೆಗಳನ್ನು ರೈತರು ಬೆಳೆದಿದ್ದು, ಬೆಳೆಗಳಿಗೆ ಸೂಕ್ತ ಬೆಲೆ ಲಭಿಸದ ಕಾರಣ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ತಕ್ಷಣ ತಾಲ್ಲೂಕಿನ ಪ್ರಮುಖ ಭಾಗಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್ ಪ್ರತಿಭಟನಾ ನಿರತ ರೈತರೊಂದಿಗೆ ಚರ್ಚಿಸಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಚರ್ಚಿಸಿ ಖರೀದಿ ಕೇಂದ್ರ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಶಿವಾನಂದ ಇಟಗಿ, ರೈತ ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಕೆ.ಎ. ದೇಸಾಯಿ, ಶಂಕರಗೌಡ ಜಾಯನಗೌಡ್ರ, ಶಿವನಗೌಡ್ರ ಗೌಡ್ರ, ಶರಣಪ್ಪ ಕಂಬಳಿ, ಶರಣಪ್ಪ ಚನ್ನಳ್ಳಿ, ಮಂಜುನಾಥ ಮುಧೋಳ, ಅಶ್ವಿನಿ ಗೌಡರ ಇದ್ದರು.

ಶೀಘ್ರ ರೈತರ ವಿವಿಧ ಬೇಡಿಕೆ ಈಡೇರಿಸಿ

ಅತೀವೃಷ್ಟಿಯಿಂದ ಹಾನಿಯಾದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ ಬೆಳೆ ಒಕ್ಕಲು ಕಾರ್ಯ ನಡೆಸಲು ಖಣ ನಿರ್ಮಾಣ ಹಾಗೂ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಪ್ರತಿ ಟನ್ ಕಬ್ಬಿಗೆ ₹3300 ಬೆಲೆ ರೈತರ ಸಾಲ ಮನ್ನಾ ಸೇರಿದಂತೆ ಶಿಂಗಟಾಲೂರ ಏತ ನೀರಾವರಿ ಯೊಜನೆಯ ಅಡಿಯಲ್ಲಿ ಕಾಲುವೆ ಮೂಲಕ ರೈತರ ಜಮೀನಿಗೆ ನೀರು ಒದಗಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.