ಗದಗ: ರಾಜ್ಯದಾದ್ಯಂತ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ, ಧರಣಿಯಲ್ಲಿ ನಿರತರಾದರು ಕೂಡ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ರೈತರನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.

‘ಈ ಸರ್ಕಾರದ ಅವಧಿಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಟ ನಡೆಸಿದ್ದಾರೆ. ಇದರಿಂದಾಗಿ, ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ರೈತರು ಧರಣಿ ಹಾಗೂ ಪ್ರತಿಭಟನೆಗಳನ್ನು ಮಾಡುತ್ತಿದ್ದರು ಕೂಡ ಸಂಬಂಧ ಪಟ್ಟ ಮಂತ್ರಿಗಳಾಗಲಿ, ಸರ್ಕಾರದ ಪ್ರತಿನಿಧಿಯಾಗಲಿ ರೈತರ ಸಂಕಟ ಕೇಳುವ ಸೌಜನ್ಯ ತೋರಿಸಿಲ್ಲ’ ಎಂದು ಹರಿಹಾಯ್ದಿದ್ದಾರೆ.

‘ಅದೇರೀತಿ, ಅತಿಥಿ ಉಪನ್ಯಾಸಕರು 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಅವರ ಸಮಸ್ಯೆಗಳಿಗೆ ಕಿವಿಗೊಡದೆ, ಸರ್ಕಾರ ನಿರ್ಲಕ್ಷ್ಯ ತೋರಿದೆ. ಆದರೆ, ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ಅಂತ ಕಾಲಹರಣ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಶಿಕ್ಷಕರನ್ನು ಭಿಕ್ಷುಕರಂತೆ ಕಾಣುತ್ತಿದೆ’ ಎಂದು ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ. ಇದೇ ರೀತಿ ಮುಂದುವರಿದರೆ ಕಾಂಗ್ರೆಸ್ ಸರ್ಕಾರ ರೈತರ ಕೋಪ ಹಾಗೂ ಶಿಕ್ಷಕರ ಶಾಪಕ್ಕೆ ಬಲಿಯಾಗುವುದು ಖಂಡಿತ’ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.