ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಷನ್‌ ಅಂತ್ಯೋದಯ 2020: ಹುಲಕೋಟಿ ಗ್ರಾ.ಪಂ.ಗೆ ಪ್ರಥಮ ರ‍್ಯಾಂಕ್‌

‘ಮಿಷನ್‌ ಅಂತ್ಯೋದಯ 2020’ ರಾಷ್ಟ್ರ ಮಟ್ಟದ ಸಮೀಕ್ಷೆ
Last Updated 5 ಜನವರಿ 2021, 18:36 IST
ಅಕ್ಷರ ಗಾತ್ರ

ಗದಗ: ಕೇಂದ್ರ ಗಾಮೀಣಾಭಿವೃದ್ಧಿ ಸಚಿವಾಲಯದ ‘ಮಿಷನ್‌ ಅಂತ್ಯೋದಯ 2020’ ರಾಷ್ಟ್ರ ಮಟ್ಟದ ಸಮೀಕ್ಷೆಯಲ್ಲಿ ಗದಗ ತಾಲ್ಲೂಕಿನ ಹುಲಕೋಟಿ ಗ್ರಾಮ ಪಂಚಾಯಿತಿ ರ‍್ಯಾಂಕಿಂಗ್‌ನಲ್ಲಿ ನಂಬರ್‌ ಒನ್‌ ಸ್ಥಾನ ಪಡೆದುಕೊಂಡಿದೆ.

‘ಮೂಲಸೌಕರ್ಯ ಅಭಿವೃದ್ಧಿ, ಸಾಕ್ಷರತೆ, ಕೃಷಿ, ಪಶುಸಂಗೋಪನೆ, ಕುಡಿಯುವ ನೀರಿನ ಸೌಕರ್ಯ, ಮಹಿಳೆ ಮತ್ತು ಮಕ್ಕಳ ಕಲ್ಯಾಣ, ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ, ರಸ್ತೆ ಅಭಿವೃದ್ಧಿ ಹೀಗೆ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ 141 ಬಗೆಯ ಅಂಶಗಳನ್ನು ಪರಿಗಣಿಸಿ ಗ್ರಾಮ ಪಂಚಾಯಿತಿಗಳಿಗೆ ಶ್ರೇಣಿ ನೀಡಲಾಗುತ್ತದೆ. ಇದರಲ್ಲಿ ಹುಲಕೋಟಿ ಗ್ರಾಮ ಪಂಚಾಯಿತಿಯು 100ಕ್ಕೆ 90 ಅಂಕಗಳನ್ನು ಪಡೆದು ರಾಷ್ಟ್ರ ಮಟ್ಟದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿದೆ’ ಎಂದು ಗದಗ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್‌.ಎಸ್‌.ಜನಗಿ ತಿಳಿಸಿದರು.

‘ಎರಡು ವರ್ಷಗಳಿಂದ ಐದನೇ ಸ್ಥಾನದಲ್ಲಿದ್ದ ಹುಲಕೋಟಿ ಗ್ರಾಮ ಪಂಚಾಯಿತಿ ಈ ಬಾರಿ ಮೊದಲನೇ ಸ್ಥಾನಕ್ಕೆ ಜಿಗಿದಿದೆ. ಇದರ ಜತೆಗೆ ತೆಲಂಗಾಣದ ಎರಡು ಗ್ರಾಮ ಪಂಚಾಯ್ತಿಗಳು ಕೂಡ ಮೊದಲ ಸ್ಥಾನ ಹಂಚಿಕೊಂಡಿವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT