ಸೋಮವಾರ, ಮೇ 17, 2021
21 °C

ಮಲಪ್ರಭಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರನ್ನು ಮತ್ತೆ ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣ 11264 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಮಲಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿದು, ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಗದಗ ಜಿಲ್ಲೆಯ ಲಖಮಾಪುರ, ಕೊಣ್ಣೂರ, ಬೂದಿಹಾಳ, ಹೊಳೆಮಣ್ಣೂರ ಗ್ರಾಮಗಳಲ್ಲಿ ಪ್ರವಾಹ ಭೀತಿ ಕಂಡುಬಂದಿದೆ.

ನದಿಯಲ್ಲಿ ನೀರು ಇಳಿದಿದ್ದ ಎರಡೇ ದಿನಗಳಲ್ಲಿ ಮತ್ತು ನೀರಿನ ಮಟ್ಟ ಏರಿಕೆಯಾಗಿರುವುದರಿಂದ ನದಿ ತೀರದ ಕುಟುಂಬಗಳು ಮತ್ತೆ ಕಂಗಾಲಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು