ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರಷ್ಟಚಾರದಲ್ಲಿ ಮುಳಗಿದ ರಾಜ್ಯ ಸರ್ಕಾರ: ಮಾಜಿ ಶಾಸಕ ಕಳಕಪ್ಪ ಬಂಡಿ

Published : 30 ಆಗಸ್ಟ್ 2024, 16:11 IST
Last Updated : 30 ಆಗಸ್ಟ್ 2024, 16:11 IST
ಫಾಲೋ ಮಾಡಿ
Comments

ಡಂಬಳ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ನೆಡೆಯುತ್ತಿಲ್ಲ. ಸರ್ಕಾರ ಅತಂತ್ರ ಸ್ಥಿತಿಯಲ್ಲಿದ್ದು, ಭ್ರಷ್ಟಚಾರದಲ್ಲಿ ಮುಳಗಿದೆ’ ಎಂದು ಮಾಜಿ ಶಾಸಕ ಕಳಕಪ್ಪ ಬಂಡಿ ಆರೋಪಿಸಿದರು.

ಡಂಬಳ ತೋಂಟದಾರ್ಯ ಕಲಾ ಭವನದಲ್ಲಿ ಡಂಬಳ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ದೇಶದಲ್ಲೇ ಅತೀ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಸಾಮಾಜಿಕ ನ್ಯಾಯ ನೀಡುವ ಪಕ್ಷವಾಗಿದ್ದು, ಸಾಮಾನ್ಯ ಕಾರ್ಯಕರ್ತರಿಗೂ ಪಕ್ಷದಲ್ಲಿ ಗೌರವಿದೆ’ ಎಂದರು.

‘ಸದಸ್ಯತ್ವ ಅಭಿಯಾನಕ್ಕೆ ಸೆ. 2ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಕಳೆದ ಬಾರಿಯಂತೆ ಪ್ರಸ್ತತ ಜಿಲ್ಲೆಯಲ್ಲಿಯೂ ಆತ್ಯಧಿಕ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಂಡಲ, ಹಾಗೂ ಎಲ್ಲ ಮೋರ್ಚಾಗಳು ಕಾರ್ಯ ಯೋಜನೆ ಹಾಕಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯಾದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅರಾಜಕತೆಯನ್ನು ಸೃಷ್ಟಿ ಮಾಡುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿ ಡಂಬಳ ಬಿಜೆಪಿ ಮಂಡಲ ಅಧ್ಯಕ್ಷ ರವಿ ಕರಿಗಾರ ಮಾತನಾಡಿದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ, ಶಶಿಧರ ದಿಂಡೂರು, ಫಕ್ಕನಗೌಡ ರಡ್ಡೇರ, ಡಿ ಪ್ರಸಾದ, ಮುದ್ಲಿಂಗಪ್ಪ ಕೊರ್ಲಹಳ್ಳಿ, ಶಿವಪ್ಪ ಅಂಕದ, ಎಲ್ ಎಂ ಚವ್ಹಾಣ್, ಬಸವರಾಜ ಚೆನಹಳ್ಳಿ, ಮಲ್ಲಪ್ಪ ಮಠದ, ಬಸಪ್ಪ ಕೊತಂಬ್ರ, ಚಂದ್ರು ಯಳಮಲಿ, ನಿಂಗಪ್ಪ ಮಾದರ, ನಾಗರಾಜ ಕಾಟ್ರಹಳ್ಳಿ, ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT