ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಯಿ ಆರೋಗ್ಯದತ್ತ ಕಾಳಜಿ ವಹಿಸಿ: ಡಾ.ವರುಣ ಸವದಿ

Published 29 ನವೆಂಬರ್ 2023, 13:04 IST
Last Updated 29 ನವೆಂಬರ್ 2023, 13:04 IST
ಅಕ್ಷರ ಗಾತ್ರ

ನರಗುಂದ: ಮನುಷ್ಯನಿಗೆ ಆರೋಗ್ಯವೇ ಸಂಪತ್ತು. ಆದ್ದರಿಂದ ಬಾಯಿ ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು ಎಂದು ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ವರುಣ ಸವದಿ ಹೇಳಿದರು.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಬಾಯಿ ಆರೋಗ್ಯ ಹಾಗೂ ದಂತ ಭಾಗ್ಯ ಯೋಜನೆ ಅಡಿಯಲ್ಲಿ ದಂತ ಉಚಿತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಟಾಕ, ಮಧ್ಯಪಾನ ಸೇವನೆಯಿಂದ ಮನುಷ್ಯನಿಗೆ ಕ್ಯಾನ್ಸರ್ ಬರುಬಹುದು. ಆದ್ದರಿಂದ ಇವುಗಳ ಸೇವನೆ ಕೈ ಬಿಡಬೇಕು ಎಂದರು.

ದಂತ ತಜ್ಞ ವೈದ್ಯಾಧಿಕಾರಿ ಡಾ.ಶ್ರೀದೇವಿ ಗುಣಗಾ ಮಾತನಾಡಿ, ಬಾಯಿ ಆರೋಗ್ಯ ತುಂಬಾ ಮುಖ. ಇದರಲ್ಲಿ ಏನಾದರೂ ಸಮಸ್ಯೆ ಕಂಡು ಬಂದಾಗ ನಿಮ್ಮ ಹತ್ತಿರದ ಆಸ್ಪತ್ರೆಗೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಶಿಬಿರದಲ್ಲಿ ದಂತ ವೈದ್ಯರಿಂದ 48 ಜನರಿಗೆ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. 11 ಜನರನ್ನು ತಪಾಸಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿ ಕೊಡಲಾಯಿತು.

ಡಾ.ರೇಣುಕಾ ಕೊರವನವರ, ಜಿ.ವಿ.ಕೊಣ್ಣೂರ, ಮಲ್ಲಿಕಾರ್ಜುನ ಹಿರೇಮಠ, ಸಿ.ಎಫ್ .ಕುಂಬಾರ್ , ಬಿ.ಎಂ. ಕೌಜಗೇರಿ, ಭಾರತಿ ಪಾಟೀಲ್, ನೀಲಕಂಠ ಮಡಿವಾಳರ, ಅಕೀಬ ಜಾವೇದ್, ಎಂಪಿ ಶಿಡ್ಲಾವ್ಕರ್, ಈರಣ್ಣ ಮೇಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT