ಗದಗ: ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಕಳೆದ ವಾರ ಜಾತ್ರೆಯ ವೇಳೆ ಜಾಯಿಂಟ್ ವೀಲ್ ಕುಸಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಗಾಯಗೊಂಡವರ ಆರೋಗ್ಯವನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರು ಸೋಮವಾರ ಇಲ್ಲಿನ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅವಘಡ ಪ್ರಕರಣದಲ್ಲಿ ಒಟ್ಟು 17 ಜನರು ಗಾಯಗೊಂಡಿದ್ದು, ಎಲ್ಲರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯರು ಹಾಗೂ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಘಟನೆಯ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಅಥವಾ ಗರಿಷ್ಠ ₹50 ಸಾವಿರವರೆಗೆ ನೆರವು ನೀಡಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಚಿಕಿತ್ಸಾ ವೆಚ್ಚ ಹೆಚ್ಚಾದಲ್ಲಿ ಸರ್ಕಾರದಿಂದ ಇನ್ನಷ್ಟು ನೆರವು ನೀಡುವ ಕುರಿತು ಸಹ ಚರ್ಚೆ ನಡೆದಿದೆ. ಗಾಯಾಳುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಜಾತ್ರೆ ಆಯೋಜಕರ ಜವಾಬ್ದಾರಿ: ಜಾತ್ರೆಗಳಲ್ಲಿ ನಡೆಯುವ ಮನರಂಜನಾ ಆಟಗಳು ಹಾಗೂ ಇತರ ವ್ಯವಸ್ಥೆಗಳ ಗುತ್ತಿಗೆ ಪಡೆದವರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದರು.

ಬಸ್ ತಂಗುದಾಣ ನಿರ್ಮಾಣ: ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯ ಜಿಲ್ಲಾಸ್ಪತ್ರೆಗೆ ಬರುವ ಸಾರ್ವಜನಿಕರು ಹಾಗೂ ರೋಗಿಗಳ ಅನುಕೂಲಕ್ಕಾಗಿ ಶೀಘ್ರದಲ್ಲೇ ಆಸ್ಪತ್ರೆ ಆವರಣದಲ್ಲಿ ಬಸ್ ತಂಗುದಾಣ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಎಸ್. ಎನ್. ಬಳ್ಳಾರಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಸಂಸ್ಥೆಯ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-23-1908853970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.