ಗದಗ: ಜಿಲ್ಲೆಯಲ್ಲಿ 2026-27ನೇ ಸಾಲಿನ ಪೂರ್ವ ಮುಂಗಾರು ಮಳೆ ಶುರುವಾಗಿದ್ದು, ರೈತ ಬಾಂಧವರು ಮಾಗಿ ಉಳುಮೆ ಕೈಗೊಳ್ಳಲು ಸೂಕ್ತ ಸಮಯವಾಗಿದೆ. ಇಳಿಜಾರಿಗೆ ಅಡ್ಡಲಾಗಿ ಬದು ನಿರ್ಮಾಣ ಮಾಡಿಕೊಂಡಲ್ಲಿ, ಬಿದ್ದ ಮಳೆಯ ನೀರನ್ನು ಹಿಡಿದಿಟ್ಟುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ರೈತರು ಬಿತ್ತನೆಗೆ ಅವಸರ ಮಾಡದೇ, ಮಣ್ಣಿನಲ್ಲಿ ಸಂಪೂರ್ಣ ತೇವಾಂಶವಾದ ನಂತರ ಬಿತ್ತನೆ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಬಿತ್ತಿದ ಬೆಳೆಯು ಸರಿಯಾಗಿ ಮೊಳಕೆ ಬರಲು ಸಾಧ್ಯವಾಗದೇ ಇರಬಹುದು, ಅಥವಾ ಬೆಳವಣಿಗೆ ವೇಳೆಗೆ ತೇವಾಂಶ ಕೊರತೆ ಉಂಟಾಗಬಹುದಾಗಿದೆ. ರೈತರು ತಮ್ಮ ಭೂಮಿಯ ಮಣ್ಣು ಪರೀಕ್ಷೆ ಕೈಗೊಂಡು, ಬೆಳೆಗಳಿಗೆ ರಸಗೊಬ್ಬರ ಮತ್ತು ಕಾಂಪೋಸ್ಟ್ ಗೊಬ್ಬರ ನೀಡಬೇಕು.

ಅಧಿಕೃತ ಪರವಾನಗಿ ಹೊಂದಿದ ಮಳಿಗೆಗಳಲ್ಲಿ ಮಾತ್ರ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು. ಕೃಷಿ ಪರಿಕರಗಳನ್ನು ಎಂ.ಆರ್.ಪಿ.ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳ ಗಮನಕ್ಕೆ ತರಬೇಕು. ಅಂತಹವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-23-1325776907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.