ಗದಗ: ‘ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಯಿಂದ ಆಡಳಿತಾತ್ಮಕ ಕಾರ್ಯಕ್ಷಮತೆ ಮತ್ತು ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಬಹುದಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಣದೀಪ್ ಡಿ. ತಿಳಿಸಿದರು.

ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ಹೆಡ್ ಹೆಲ್ಡ್ ಹೈ ಫೌಂಡೇಶನ್, ಸಹಯೋಗದಲ್ಲಿ ಶನಿವಾರ ನಡೆದ ‘ಜನ ಎಐ ಶೃಂಗಸಭೆ–2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿಯ ಸಮನ್ವಯದ ಮೂಲಕ ಮಾತ್ರ ಸಮಗ್ರ ಸಾಧಿಸಲು ಸಾಧ್ಯ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡ ಮಾತನಾಡಿ, ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಆಧುನಿಕ ಆಡಳಿತ ವ್ಯವಸ್ಥೆ, ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಶಿಕ್ಷಣ, ಆರೋಗ್ಯ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ಹೆಡ್ ಹೆಲ್ಡ್ ಹೈ ಫೌಂಡೇಶನ್ನ ವ್ಯವಸ್ಥಾಪಕ ಟ್ರಸ್ಟಿ ಮದನ್ ಪದಕಿ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಗುಪ್ತಾ ಮಾತನಾಡಿ, ಕೃತಕ ಬುದ್ಧಿಮತ್ತೆ ಆಧಾರಿತ ನವೀನತೆಗಳು ಯುವಕರ ಉದ್ಯೋಗಾರ್ಹತೆ, ಉದ್ಯಮಶೀಲತೆ ಹಾಗೂ ಡಿಜಿಟಲ್ ಆರ್ಥಿಕತೆಯ ವಿಕಸನಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದರು.

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತ್ ಜೆ.ಸಿ., ಕಾರ್ಯಕ್ರಮ ಸಂಯೋಜಕ ಡಾ. ಅಮಿತ್ ವಿಕ್ರಮ್ ಹಾಗೂ ಎಂಎಸ್ಸಿ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಂತ್ರಜ್ಞಾನವು ಮಾನವಕೇಂದ್ರಿತ ಆಗಿರಬೇಕು ಹಾಗೂ ಸಮಾಜದ ತಳಮಟ್ಟದ ಜನರಿಗೆ ಲಾಭವಾಗುವ ರೀತಿಯಲ್ಲಿ ಬಳಸಬೇಕು ಎಂಬುದು ಅತ್ಯಂತ ಅಗತ್ಯವಾಗಿದೆ.
ಪ್ರೊ. ಸುರೇಶ ವಿ.ನಾಡಗೌಡ ಪ್ರಭಾರ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.