ಗದಗ: ಹಿಂದೂ ಸಂಸ್ಕೃತಿ ಉಳಿವಿಗಾಗಿ ಎಲ್ಲ ಸಮಾಜದವರು ಒಗ್ಗೂಡಬೇಕು. ಈ ಹಿನ್ನಲೆಯಲ್ಲಿ ನಗರದಲ್ಲಿ ಮೇ 31ರಂದು ನಡೆಯುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಬಂಜಾರಾ ಸಮಾಜದವರೆಲ್ಲರೂ ಭಾಗಿಯಾಗಬೇಕು ಎಂದು ವಿಜಯಪುರದ ಕೆಸರಟ್ಟಿಯ ಸೋಮಲಿಂಗ ಸ್ವಾಮೀಜಿ ಹೇಳಿದರು.

‘ಹಿಂದಿನಿಂದಲೂ ಹಿಂದೂ ಸಂಸ್ಕೃತಿಯನ್ನು ಹಾಳುಮಾಡುವಂತಹ ಷಡ್ಯಂತ್ರ ನಡೆಯುತ್ತಿದೆ. ಆದ್ದರಿಂದ ಹಿಂದೂ ಬಾಂಧವರೆಲ್ಲರೂ ಸಮಾವೇಶದಲ್ಲಿ ಭಾಗಿಯಾಗಬೇಕು’ ಎಂದು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಂಜಾರ ಸಮಾಜವು ತಮ್ಮ ಕಲೆ, ವೇಷಭೂಷಣ, ಸಂಸ್ಕೃತಿ, ಸಂಪ್ರದಾಯಗಳ ಮೂಲಕ ಹಿಂದೂ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿಕೊಂಡು ಹೋಗಬಹುದಾದ ಜೀವಂತ ಉದಾಹರಣೆಯಾಗಿದೆ. ಆದ್ದರಿಂದ ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ತಾಂಡಾಗಳಿಂದ ಭಾಗವಹಿಸಿ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು’ ಎಂದರು.

ಮೇ 31ರಂದು ನಗರದ ವಿಡಿಎಸ್ಟಿ ಮೈದಾನದಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಕನೇರಿ ಶ್ರೀಗಳ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವರು ಎಂದರು.

ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ, ಮುಖಂಡರಾದ ಕಿಶನ್ ಮೇರವಾಡೆ, ಮಂಜುನಾಥ ಹಳ್ಳೂರಮಠ, ಪರಮೇಶ ನಾಯಕ, ಭೀಮಪ್ಪ ತೋಟದ, ಟಿ.ಡಿ. ಪೂಜಾರ, ಕೆ.ಸಿ. ನಭಾಪುರ, ವಿಠಲ ತೋಟದ,ಸೋಮೇಶ ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-23-1861859979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.