ಗದಗ: ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಸೋಮವಾರ ಸಂಜೆ 7ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ನಡೆಯುವ 2,799ನೇ ಶಿವಾನುಭವ ಕಾರ್ಯಕ್ರಮದಲ್ಲಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ನೀಡುವ ‘ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ’ಯನ್ನು ಜಲಸಂರಕ್ಷಕ ರಾಜೇಂದ್ರಸಿಂಗ್ ಅವರಿಗೆ ಪ್ರದಾನ ಮಾಡಲಾಗುವುದು.

ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು. ಜೆ.ಕೆ.ಜಮಾದಾರ ಉಪನ್ಯಾಸ ನೀಡುವರು. ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಮಾಜಿ ಶಾಸಕ ಜಿ.ಎಸ್.ಗಡ್ಡದ್ದೇವರಮಠ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅತಿಥಿಗಳಾಗಿ ಭಾಗವಹಿಸುವರು.

ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಎಲ್. ಲಿಂಬಯ್ಯಸ್ವಾಮಿಮಠ ಹಾಜರಿರುವರು. ಮೃತ್ಯುಂಜಯ ಹಿರೇಮಠ ಮತ್ತು ಗುರುನಾಥ ಸುತಾರ ವಚನ ಸಂಗೀತ ನಡೆಸಿಕೊಡುವರು. ಖುಷಿ ಜಗದೀಶ ಹಳ್ಳಿಕೇರಿ ಧರ್ಮಗ್ರಂಥ ಪಠಿಸುವರು. ಶ್ರಾವಣಿ ರಾಮಪ್ಪ ಕಳ್ಳಿಮನಿ, ವಚನ ಚಿಂತನ ನಡೆಸಿಕೊಡುವರು ಎಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-23-97379483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.