ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಆರೋಗ್ಯವಂತರಿಂದ ಸ್ವಸ್ಥ ಸಮಾಜ ನಿರ್ಮಾಣ: ಕುಲಪತಿ ಡಾ. ಬಿ.ಸಿ.ಭಗವಾನ್‌

Published : 12 ಅಕ್ಟೋಬರ್ 2025, 6:59 IST
Last Updated : 12 ಅಕ್ಟೋಬರ್ 2025, 6:59 IST
ಫಾಲೋ ಮಾಡಿ
Comments
ದೇಶದ ಭವಿಷ್ಯ ನಿರ್ಧರಿಸುವ ಯುವಕರನ್ನು ನಶೆಯ ಹಿಡಿತದಿಂದ ಆಚೆ ತಂದರೆ ನಿಶ್ಚಯವಾಗಿ ದೇಶದ ಅಭಿವೃದ್ಧಿ ಆಗುತ್ತದೆ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ಧ್ಯೇಯೋದ್ದೇಶ ಹೊಂದಿದೆ
ಡಾ. ಬಿ.ಸಿ.ಭಗವಾನ್ ಕುಲಪತಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಗದಗ ಜಿಲ್ಲೆಯನ್ನು ನಶೆಮುಕ್ತ ಮಾಡಲು ಎಲ್ಲರೂ ಪಣ ತೊಡಬೇಕಿದೆ. ರಾಜ್ಯದಾದ್ಯಂತ ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಯತ್ನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ
ಎಚ್.ಕೆ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಅಂಗಾಂಗದಾನ ಗದಗ ಜಿಲ್ಲೆಗೆ 4ನೇ ಸ್ಥಾನ
‘ಅಂಗಾಂಗ ದಾನದಲ್ಲಿ ಗದಗ ಜಿಲ್ಲೆ 4ನೇ ಸ್ಥಾನದಲ್ಲಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ’ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು. ‘20ನೇ ಸ್ಥಾನದಲ್ಲಿದ್ದ ಗದಗ ಜಿಲ್ಲೆ 4ನೇ ಸ್ಥಾನಕ್ಕೆ ಹೋಗಲು ಜಿಲ್ಲೆಯ ಜನರ ಒಟ್ಟು ಪ್ರಯತ್ನ ಕಾರಣವಾಗಿದೆ. ಅಂಗಾಂಗ ದಾನದ ಬಗ್ಗೆ ಗದಗ ಜಿಲ್ಲೆಯಲ್ಲಿ ಚಳವಳಿಯ ರೂಪದ ಜಾಗೃತಿ ಮೂಡಿಸಿದ ಕೀರ್ತಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ’ ಎಂದರು. ಕುಲಪತಿ ಡಾ. ಬಿ.ಸಿ.ಭಗವಾನ್ ಅವರಿಗೆ ಗದುಗಿನ ಮೇಲೆ ಹೆಚ್ಚು ಪ್ರೀತಿ. ಗದಗ ಜಿಲ್ಲೆಯ ಸಹಕಾರ ಕ್ಷೇತ್ರದ ಚಳವಳಿಯಲ್ಲಿ ನಮ್ಮ ತಂದೆ ಕೆ.ಎಚ್.ಪಾಟೀಲ ಹಾಗೂ ಬಿ.ಎಸ್.ವಿಶ್ವನಾಥ್ ಅವರ ಹೆಸರು ಮುಂಚೂಣಿಯಲ್ಲಿವೆ. ಕುಲಪತಿಗಳಾದ ಡಾ. ಬಿ.ಸಿ. ಭಗವಾನ್ ಅವರು ವಿ.ಎಸ್. ವಿಶ್ವನಾಥ್ ಅವರ ಅಳಿಯ. ಈ ನಂಟೇ ಅವರನ್ನು ಗದಗ ಜಿಲ್ಲೆಯ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಲು ಪ್ರೇರಣೆ ನೀಡಿದೆ’ ಎಂದು ತಿಳಿಸಿದರು.
ಹಾಲ್ಟ್ ಸಾಲ್ಟ್ ಅಭಿಯಾನ
ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆಗೆ ಕಡಿವಾಣ ಹಾಕಲು ‘ಹಾಲ್ಟ್ ಸಾಲ್ಟ್’ ಅಭಿಯಾನ ಕೈಗೊಳ್ಳಲಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ.ಭಗವಾನ್ ಹೇಳಿದರು. ಉಪ್ಪಿನ ಬಳಕೆಯನ್ನು ಕಡಿಮೆ ಮಾಡಲು ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶ. ನಾವು ಪ್ರತಿದಿನ ಶೇ 5ರಷ್ಟು ಉಪ್ಪನ್ನು ಬಳಸಬೇಕು ಎನ್ನುವ ಎಚ್ಚರಿಕೆಯನ್ನು ಮೀರಿ ಶೇ 20ರಿಂದ 30ರಷ್ಟು ಹೆಚ್ಚು ಪ್ರಮಾಣದ ಉಪ್ಪನ್ನು ಆಹಾರದಲ್ಲಿ ಬಳಸುತ್ತೇವೆ. ಇದರಿಂದ ಜನರಲ್ಲಿ ಅದರಲ್ಲೂ ಮುಖ್ಯವಾಗಿ ಯುವಸಮುದಾಯದಲ್ಲಿ ಬ್ರೈನ್‌ ಸ್ಟ್ರೋಕ್ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಅಧಿಕ ರಕ್ತದೊತ್ತಡದಂತಹ ಜೀವನಶೈಲಿ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT