ಗದಗ: ಗದಗ–ಬೆಟಗೇರಿ ನಗರದ ವಾರ್ಡ್ ಸಂಖ್ಯೆ 10ರ ಕುರಹಟ್ಟಿ ಪೇಟೆಯಲ್ಲಿ ₹1 ಕೋಟಿ ವೆಚ್ಚದ ಸಿ.ಸಿ ರಸ್ತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘2025–26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಕೈಗೆತ್ತಿಕೊಂಡಿರುವ ಈ ಕಾಮಗಾರಿಯು ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು’ ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

‘ಸಾರ್ವಜನಿಕರ ಅನುಕೂಲಕ್ಕಾಗಿ ನಡೆಸುತ್ತಿರುವ ರಸ್ತೆ ಕಾಮಗಾರಿಗಳು ದೀರ್ಘಕಾಲದವರೆಗೆ ಬಾಳಿಕೆ ಬರಬೇಕು. ಕಾಮಗಾರಿಯ ಪ್ರತಿಯೊಂದು ಹಂತದಲ್ಲೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು’ ಎಂದು ಎಚ್ಚರಿಕೆ ನೀಡಿದರು.

‘ನಗರಾಭಿವೃದ್ಧಿ ದೃಷ್ಟಿಯಿಂದ ಮೂಲಸೌಕರ್ಯಗಳ ಅಭಿವೃದ್ಧಿ ಅತ್ಯಂತ ಮುಖ್ಯವಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಕುರಹಟ್ಟಿಪೇಟೆ ಭಾಗದಲ್ಲಿ ಉತ್ತಮ ರಸ್ತೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಲಿದ್ದು, ಸಂಚಾರ ವ್ಯವಸ್ಥೆಯೂ ಸುಧಾರಿಸಲಿದೆ’ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಸಭಾ ಸದಸ್ಯ ಇಮ್ತಿಯಾಜ್ ಶಿರಹಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಮುಖ್ಯಸ್ಥರಾದ ಜಾಂಗೀರ ಅಣ್ಣೀಗೇರಿ, ಈಶ್ವರ ಗದುಗಿನ, ಹಣಗಿ ಭಾಷಾ, ಇಬ್ರಾಹಿಂ ಶಿರಹಟ್ಟಿ, ಸೋಪೀನ್ ಅಣ್ಣಿಗೇರಿ, ಫಾರುಕ್ ಮಖಾಂದಾರ್, ಯಾಶೀನ್, ಬಸವರಾಜ ಕಡೇಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-1576153711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.