ಗದಗ: ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಾಕಷ್ಟು ದಾಸ್ತಾನಿದೆ, ಜನ ಗಾಬರಿಗೊಳ್ಳಬೇಡಿ ಎಂದು ಹೇಳುತ್ತಿದ್ದ ಮೋದಿ ಸರ್ಕಾರ, ಫಲಿತಾಂಶ ಬಂದ ನಂತರ ಇಂಧನ ದರ ಏರಿಸಿ ಜನರಿಗೆ ದ್ರೋಹ ಮಾಡಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಕಿಡಿಕಾರಿದ್ದಾರೆ.

‘ಅಮೆರಿಕಾ-ಇಸ್ರೇಲ್ ಸಾಮ್ರಾಜ್ಯಶಾಹಿಗಳ ದುರಾಕ್ರಮಣದಿಂದ ಹಲವೆಡೆ ಬಿಕ್ಕಟ್ಟು ಸೃಷ್ಟಿಯಾಗಿದೆ. ವಿವೇಕಯುತ ನಡೆಯೆಂದರೆ ಈ ಯುದ್ಧೋನ್ಮಾದಗಳ ವಿರುದ್ಧ ಇತರ ರಾಷ್ಟ್ರಗಳೊಂದಿಗೆ ಕೈಜೋಡಿಸಿ ಯುದ್ಧ ನಿಲ್ಲಿಸಲು ಪ್ರಯತ್ನಿಸುವುದಾಗಿತ್ತು. ಆದರೆ ಮೋದಿಯವರು ಅಮೆರಿಕದ ಹಿಂಬಾಲಕ ನಾಯಕನಾಗಿ, ಇಸ್ರೇಲ್ ಅನ್ನು ಅಪ್ಪಿಕೊಳ್ಳುವ ಮೂಲಕ ಜಾಗತಿಕವಾಗಿ ದಕ್ಷಿಣದ ದೇಶಗಳ ನಾಯಕತ್ವಕ್ಕೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಬಿಜೆಪಿಗೆ ಜನಹಿತಕ್ಕಿಂತ ಮತ್ತೆ ಚುನಾವಣೆ ಗೆಲ್ಲುವುದೇ ಮುಖ್ಯ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಜನರಿಗೆ ಮಿತವ್ಯಯದ ಪಾಠ ಮಾಡಿದ ಮೋದಿ, ಮರುದಿನವೇ ರೋಡ್ ಶೋ ಮತ್ತು ಏರೋ ಶೋಗಳಲ್ಲಿ ಪಾಲ್ಗೊಂಡಿದ್ದಾರೆ’ ಎಂದು ಪ್ರಕಟಣೆಯಲ್ಲಿ ಹರಿಹಾಯ್ದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-1703934050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.