ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ | ವಿವೇಕಾನಂದರ ಕಂಚಿನ ಪ್ರತಿಮೆ ಅನಾವರಣ ನಾಳೆ

₹ 20 ಲಕ್ಷ ವೆಚ್ಚದಲ್ಲಿ ನಿರ್ಮಾಣ–ಕೋಲ್ಕತ್ತದಿಂದ ಸಾಗಣೆ
Published : 10 ಸೆಪ್ಟೆಂಬರ್ 2024, 5:07 IST
Last Updated : 10 ಸೆಪ್ಟೆಂಬರ್ 2024, 5:07 IST
ಫಾಲೋ ಮಾಡಿ
Comments

ಗದಗ: ಸ್ವಾಮಿ ವಿವೇಕಾನಂದರು 1893ರ ಸೆಪ್ಟೆಂಬರ್ 11ರಂದು ಷಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಭಾರತೀಯ ಧರ್ಮ, ಪರಂಪರೆ ಕುರಿತು ತಮ್ಮ ವಿಚಾರ ಮಂಡಿಸಿದ ಸ್ಮರಣೆಗಾಗಿ ಬುಧವಾರ (ಸೆಪ್ಟೆಂಬರ್ 11) ಗದುಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ ಆವರಣದಲ್ಲಿ 21 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಕಂಚಿನ ಪ್ರತಿಮೆ ಅನಾವರಣವಾಗಲಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಕಂಚಿನ ಪ್ರತಿಮೆ ಅನಾವರಣ ನೆರವೇರಿಸಲಿದ್ದು, ವಿಶ್ವವಿದ್ಯಾಲಯದಲ್ಲಿ ‘ವಿವೇಕ ಲೋಕ’ ಹೆಸರಿನಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳ ಅಧ್ಯಯನ, ಸಂಶೋಧನೆ ಸೇರಿ ವಿವಿಧ ಚಟುವಟಿಕೆ ನಡೆಯಲಿವೆ.

ಒಟ್ಟು 18.5 ಅಡಿ ಎತ್ತರದ ಪೆಡಸ್ಟಲ್ (ಪೀಠ) ಮೇಲೆ 21 ಅಡಿ ಎತ್ತರದ ಪ್ರತಿಮೆ ಅನಾವರಣವಾಗಲಿದೆ. ₹ 20 ಲಕ್ಷ ವೆಚ್ಚದಲ್ಲಿ ಕೋಲ್ಕತ್ತದ ರಾಮಕೃಷ್ಣ ವಿವೇಕಾನಂದ ಮಿಷನ್‌ ಈ ಪ್ರತಿಮೆ ಸಿದ್ಧಪಡಿಸಿ, ವಿಶ್ವವಿದ್ಯಾಲಯಕ್ಕೆ ಉಚಿತವಾಗಿ ನೀಡಿದೆ. ಇದರ ತೂಕ 4 ಟನ್. ಕೋಲ್ಕತ್ತದಿಂದ ಗದುಗಿಗೆ ಲಾರಿಯಲ್ಲಿ ಸಾಗಿಸಲು ನಾಲ್ಕು ದಿನ ಬೇಕಾದವು.

‘ಸ್ವಾಮಿ ವಿವೇಕಾನಂದರು ದೇಶದ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಆದರ್ಶಪ್ರಾಯರು. ಮಹಾತ್ಮ ಗಾಂಧೀಜಿ ಅವರ ಗ್ರಾಮೀಣಾಭಿವೃದ್ಧಿ ಕಲ್ಪನೆ ಮೇಲೆ ಸ್ಥಾಪಿತ ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ವಿಚಾರಧಾರೆ‌ಗೆ ಆದ್ಯತೆ ನೀಡುವ ಉದ್ದೇಶವಿದೆ’ ಎಂದು ಪ್ರಭಾರ ಕುಲಪತಿ ಪ್ರೊ. ಎಸ್‌.ವಿ.ನಾಡಗೌಡರ ತಿಳಿಸಿದ್ದಾರೆ.

‘ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಸದಾ ಕಾಲ ಪ್ರಸ್ತುತ. ಅವರ ವಿಚಾರಗಳು ಎಷ್ಟು ಪ್ರಸ್ತುತ ಎಂಬುದನ್ನು ಇಂದಿನ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಆಶಯದಿಂದ ವಿಶ್ವವಿದ್ಯಾಲಯದಲ್ಲಿ ಅವರ ಪ್ರತಿಮೆ ಸ್ಥಾಪಿಸುವ ಉದ್ದೇಶವಿದೆ’ ಎಂದು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದರ ಕಂಚಿನ ಪುತ್ಥಳಿ
ಸ್ವಾಮಿ ವಿವೇಕಾನಂದರ ಕಂಚಿನ ಪುತ್ಥಳಿ
1893ರ ಸೆಪ್ಟೆಂಬರ್ 11ರಂದು ಷಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಮಾತನಾಡಿದ್ದರ ನೆನಪಿನಲ್ಲಿ ಪ್ರತಿಮೆ ಅನಾವರಣ ಮಾಡಲಾಗುವುದು.
ಪ್ರೊ. ಎಸ್‌.ವಿ.ನಾಡಗೌಡರ ಪ್ರಭಾರ ಕುಲಪತಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯ ಗದಗ
ಸ್ವಾಮಿ ವಿವೇಕಾನಂದರ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗೆ ‘ವಿವೇಕ ಲೋಕ’ ವಿಭಾಗದಡಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತೇವೆ. ಕಾರ್ಯಕ್ರಮ ನಡೆಸುತ್ತೇವೆ.
ಪ್ರಶಾಂತ್‌ ಜೆ.ಸಿ ಹಣಕಾಸು ಅಧಿಕಾರಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯ ಗದಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT