ಗದಗ: ‘ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡಗಳು ಕವಿದಿರುವ ಇಂದಿನ ಪರಿಸ್ಥಿತಿಯಲ್ಲಿ ಭಗವಾನ್ ಬುದ್ಧನ ಶಾಂತಿ ಮತ್ತು ಸಹಬಾಳ್ವೆಯ ಸಂದೇಶಗಳು ಹೆಚ್ಚು ಪ್ರಸ್ತುತವಾಗಿವೆ. ಬುದ್ಧ ಎಂದರೆ ಕಣ್ಣುಚ್ಚಿ ಕುಳಿತ ಶಾಂತಿ ಮೂರ್ತಿ ಮಾತ್ರವಲ್ಲ; ಆತ ಜಗತ್ತಿಗೆ ಏಕಾಗ್ರತೆ ಮತ್ತು ಸಮಾನತೆಯ ಪಾಠ ಕಲಿಸಿದ ಮಹಾಗುರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಬುದ್ಧನ ತತ್ವಗಳು ಕೇವಲ ಒಂದು ಧರ್ಮ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ, ಅವು ಇಡೀ ಜಗತ್ತಿನ ಆಸ್ತಿ. ರಷ್ಯಾ-ಉಕ್ರೇನ್ ಹಾಗೂ ಇಸ್ರೇಲ್-ಇರಾನ್ ನಡುವಿನ ಯುದ್ಧಗಳಿಂದಾಗಿ ಜಗತ್ತು ಭಾರಿ ಬೆಲೆ ತರುತ್ತಿದೆ. ಕೇವಲ ಯುದ್ಧದ ಕಾರಣದಿಂದಾಗಿ ಅಮೆರಿಕದಂತಹ ದೊಡ್ಡ ರಾಷ್ಟ್ರ ದೊಡ್ಡ ಮಟ್ಟದಲ್ಲಿ ಆರ್ಥಿಕ ನಷ್ಟ ಅನುಭವಿಸಿದೆ. ಯುದ್ಧದಿಂದಾಗುವ ಸಾವು-ನೋವು ಮನುಕುಲದ ವಿನಾಶಕ್ಕೆ ಹಾದಿಯಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ‘ಜಗತ್ತಿನಲ್ಲಿ ಶಾಂತಿ, ಅಹಿಂಸೆ ಮತ್ತು ಮಾನವೀಯತೆ ನೆಲೆಸಲು ಭಗವಾನ್ ಬುದ್ಧನ ತತ್ವಗಳು ಅತ್ಯವಶ್ಯಕವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ನಿವೃತ್ತ ಉಪನ್ಯಾಸಕ ಸತೀಶ ಪಾಶಿ ಮಾತನಾಡಿದರು. ಜೇನುಗೂಡು ಕಲಾತಂಡದ ಬಸವರಾಜ ಅಂಗಡಿ ಮತ್ತು ಸಂಗಡಿಗರು ಭಗವಾನ್ ಬುದ್ಧನ ಗೀತಗಾಯನ ಪ್ರಸ್ತುತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಬಿ.ಇಡಿ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಭಗವಾನ ಬುದ್ಧರ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ವೀಜೆತರಾದ ವಿದ್ಯಾರ್ಥಿಗಳು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಎಡಿಸಿ ಡಾ. ದುರಗೇಶ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಸಮಾಜದ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.