ಶನಿವಾರ, ಏಪ್ರಿಲ್ 4, 2020
19 °C

ಗದಗ ಬಸ್‌ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ನಗರದ ಮಾರುಕಟ್ಟೆ ಪ್ರದೇಶದ ಬಳಿ ನಿರ್ಮಾಣಗೊಳ್ಳುತ್ತಿರುವ ಬಸ್‌ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರು ಇಡಲು ಅಗತ್ಯದ ಕ್ರಮ ವಹಿಸುವಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ವಾಯವ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

‘ಬಸ್‌ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂಬ ಸಾರ್ವಜನಿಕರ, ಸಂಘ ಸಂಸ್ಥೆಗಳ ಬೇಡಿಕೆ ನ್ಯಾಯೋಚಿತವಾಗಿದ್ದು, ನಿಯಮಾನುಸಾರ ಅಗತ್ಯದ ಕ್ರಮ ಕೈಗೊಳ್ಳಿ’ ಎಂದು ಅವರು ತಿಳಿಸಿದ್ದಾರೆ.

ಗದಗ ನಗರದ ಹೃದಯ ಭಾಗದಲ್ಲಿದ್ದ, ಶಿಥಿಲಗೊಂಡಿದ್ದ ಹಳೆ ಬಸ್‌ ನಿಲ್ದಾಣ ಕಟ್ಟಡವನ್ನು ಮೂರು ವರ್ಷದ ಹಿಂದೆ ನೆಲಸಮಗೊಳಿಸಿ, ಅದೇ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಒಟ್ಟು ₹5 ಕೋಟಿ ವೆಚ್ಛದಲ್ಲಿ ಮೊಟ್ಟೆಯಾಕಾರದಲ್ಲಿ (ಓವಲ್ ಮಾದರಿ) ಈ ಕಟ್ಟಡ ತಲೆ ಎತ್ತುತ್ತಿದೆ.

ಬಸ್‌ ನಿಲ್ದಾಣದ ಕಟ್ಟಡ ಕಾಮಗಾರಿ ವಿಳಂಬವಾಗಿರುವುದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಬಸ್‌ ನಿಲ್ದಾಣ ಉದ್ಘಾಟನೆ ಮಾಡಬೇಕು ಮತ್ತು ಈ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂದು ಆಗ್ರಹಿಸಿ, ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

‘ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇದೇ ತಿಂಗಳಲ್ಲಿ ಉದ್ಘಾಟನೆ ನಡೆಯಲಿದೆ’ ಎಂದು ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್‌.ಸಿ. ಹಿರೇಮಠ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)