ಗದಗ: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಶೀಘ್ರ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಶಾಂತಣ್ಣ ಮುಳವಾಡ ಆಗ್ರಹಿಸಿದರು.

‘ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ನಿಗಮದ ನೌಕರರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ವೇತನ ಪರಿಷ್ಕರಣೆ, ಬಾಕಿ ವೇತನ ಪಾವತಿ ಸೇರಿದಂತೆ ಅನೇಕ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಈ ಹಿನ್ನಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೃಹತ್ ಶ್ರೇಯೋಭಿವೃದ್ಧಿ ಸಮಿತಿ ವತಿಯಿಂದ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಡಲಾಗಿತ್ತು. ಹೈಕೋರ್ಟ್ ಅದಕ್ಕೆ ತಡೆ ನೀಡಿದ್ದರಿಂದ ಮುಷ್ಕರ ಮುಂದೂಡಲಾಗಿದೆ’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸರ್ಕಾರ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು. 2026ರ ಫೆ. 18ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ತಿದ್ದುಪಡಿ ಮಾಡಿ, 2023ರ ಡಿ. 31ರಂದು ಚಾಲ್ತಿಯಲ್ಲಿದ್ದ ಮೂಲ ವೇತನದ ಶೇ 25ರಷ್ಟು ಹೆಚ್ಚಿಸಿ, 2024ರಿಂದ ನಾಲ್ಕು ವರ್ಷಗಳ ಅವಧಿಗೆ ಜಾರಿಗೊಳಿಸಬೇಕು. 2022ರಲ್ಲಿದ್ದ ಶೇ 31 ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ, ವಾರ್ಷಿಕ ಬಡ್ತಿಯನ್ನು 2024ರ ನಮ್ಮ ಬೇಡಿಕೆಯ ಪಟ್ಟಿಯಲ್ಲಿರುವಂತೆ ಹೆಚ್ಚಿಸಿ ವೇತನ ಶ್ರೇಣಿ ರಚಿಸಬೇಕು’ ಎಂದು ಒತ್ತಾಯಿಸಿದರು.

ಕೋವಿಡ್ ಸಂದರ್ಭದಲ್ಲಿ 12 ತಿಂಗಳ ಉಳಿದಿರುವ ಬಾಕಿ ಹಣವನ್ನು ಸೇವೆಯಲ್ಲಿರುವ ಹಾಗೂ ನಿವೃತ್ತಿ ನೌಕರರಿಗೆ ಪಾವತಿಸಬೇಕು. 26 ತಿಂಗಳ ಬಾಕಿ ಹಣ ₹1,272 ಕೋಟಿಯನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಹಾಗೂ ಫಾರಂ-4 ಮತ್ತಿತರ ಬೇಡಿಕೆಗಳನ್ನು ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಒಂದು ತಿಂಗಳ ಕಾಲಮಿತಿಯಲ್ಲಿ ಬಗೆಹರಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಪದಾಧಿಕಾರಿಗಳಾದ ಆರ್.ಎಸ್.ಕಾಶಿಗೌಡರ್, ಬಿ.ಎಚ್. ರಾಮೇನಹಳ್ಳಿ, ಎಂ. ಆಂಜನೇಯ, ಕರಣಾಚಿ, ಆರ್.ಜೆ. ಅರಮನಿ, ಶಿವಣ್ಣ ಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-777848817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.