ಗದಗ: ‘ಜನಗಣತಿಯಲ್ಲಿ ಭಾಗವಹಿಸುವ ಗಣತಿದಾರರು ಶಿಸ್ತು ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.

ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಗದಗ ನಗರ ಮತ್ತು ಗ್ರಾಮೀಣ ಭಾಗಗಳ ಗಣತಿದಾರರಿಗೆ ನಗರದ ಗುರುಬಸವ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಸಮಗ್ರ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.

‘ಜನಗಣತಿ ದೇಶದ ಯೋಜನೆ ರೂಪಿಸಲು ಇರುವ ಮೂಲ ಆಧಾರವಾಗಿದ್ದು, ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರದ ಯೋಜನೆಗಳು ರೂಪುಗೊಳ್ಳಲು ಈ ಮಾಹಿತಿ ಬಹುಮುಖ್ಯವಾಗುತ್ತದೆ’ ಎಂದು ಹೇಳಿದರು.

‘ಜನರ ಸಹಕಾರವಿಲ್ಲದೆ ಗಣತಿ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಗಣತಿದಾರರು ಪ್ರತಿ ಮನೆಗೆ ಭೇಟಿ ನೀಡಿದಾಗಲೂ ಗೌರವದಿಂದ ವರ್ತಿಸಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.

ತರಬೇತಿ ಕಾರ್ಯಕ್ರಮದಲ್ಲಿ ಗಣತಿದಾರರಿಗೆ ಕಾರ್ಯಪದ್ಧತಿ, ಮಾಹಿತಿಯ ಸಂಗ್ರಹಣೆ ವಿಧಾನಗಳು, ತಂತ್ರಜ್ಞಾನ ಬಳಕೆ ಹಾಗೂ ಕ್ಷೇತ್ರ ಮಟ್ಟದ ಸವಾಲುಗಳನ್ನು ಎದುರಿಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ವಿಧಾನ, ಪ್ರತಿ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಗತಿ ದಾಖಲಿಸುವ ಕ್ರಮ, ಮಾಹಿತಿಯ ನಿಖರತೆ ಕಾಪಾಡುವ ಅಗತ್ಯತೆ ಹಾಗೂ ಗೋಪ್ಯತೆ ಕಾಯ್ದುಕೊಳ್ಳುವ ಮಹತ್ವ ವಿವರಿಸಲಾಯಿತು. ಜತೆಗೆ, ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ಮೂಲಕ ಮಾಹಿತಿ ದಾಖಲಿಸುವ ವಿಧಾನಗಳನ್ನೂ ಪರಿಚಯಿಸಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಪರಶುರಾಮ್ ಶೇರಖಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣತಿದಾರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-23-443282578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.