ಸ್ವಚ್ಛ ನಗರಕ್ಕೆ ಎಲ್ಲರೂ ಕೈಜೋಡಿಸಿ: ಪವಾರ
‘ಘನತ್ಯಾಜ್ಯ ನಿರ್ವಹಣಾ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಹೇಳಿದರು. ‘ಕಮ್ಯುನಿಟಿ ಮೊಬೈಲೈಜರ್‌ಗಳು ವಾರ್ಡ್‌ವಾರು ಮಾಹಿತಿ ಅಪ್‌ಡೇಟ್ ಮಾಡುತ್ತಾರೆ. ಅವರ ಸಲಹೆಗಳೊಂದಿಗೆ ಸ್ಯಾನಿಟರಿ ಸೂಪರ್‌ವೈಜಸರ್‌ಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಗದಗ ನಗರವನ್ನು ಮೂಲಸೌಕರ್ಯಗಳೊಂದಿಗೆ ಸ್ವಚ್ಛ ನಗರವನ್ನಾಗಿಸಲು ಎಲ್ಲರೂ ಸಹಕರಿಸಬೇಕು’ ಎಂದರು.