ಗದಗ: ತಾಲ್ಲೂಕಿನ ನಾಗಸಮುದ್ರ ಗ್ರಾಮದ ಸರಹದ್ದಿನಲ್ಲಿರುವ ದಂಡಿನ ದುರ್ಗಾದೇವಿ ದೇವಸ್ಥಾನದ ಕಟ್ಟಡಕ್ಕೆ ತೊಂದರೆ ಕೊಡಲು ಬಂದರೆ ಹೋರಾಟಕ್ಕೆ ಮುಂದಾಗುವುದಾಗಿ ಕರವೇ (ಎಚ್.ಶಿವರಾಮೇಗೌಡ್ರ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪಿ. ಪರ್ವತಗೌಡ್ರ ಎಚ್ಚರಿಕೆ ನೀಡಿದರು.

ದುರುದ್ದೇಶದಿಂದ ಕಾನೂನು ಬಾಹಿರವಾಗಿ ದೇವಸ್ಥಾನದ ಮೂಲಕ ಶಿಂಗಟಾಲೂರು ಏತ ನೀರಾವರಿ ಯೋಜನೆಯ ಪೈಪ್ಲೈನ್ ಅಳವಡಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದರು. ಪೈಪ್ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವ ದೇವಸ್ಥಾನ ಸ್ಥಳದ ಬಳಿ ಸಂಘಟನೆ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದಂಡಿನ ದುರ್ಗಾದೇವಿ ಗ್ರಾಮ ದೇವತೆಯಾಗಿದೆ. ದೇವಸ್ಥಾನದ ಕಟ್ಟಡವನ್ನು ಕರ್ನಾಟಕ ನೀರಾವರಿ ನಿಗಮ ಇಲಾಖೆಯ ಅಧಿಕಾರಿಗಳು ಮತ್ತು ಕಾಮಗಾರಿಯ ಗುತ್ತಿಗೆದಾರರು ಅಭಿವೃದ್ಧಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಮತ್ತು ಅಕ್ರವಾಗಿ ಹಾನಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಸ್ತೆ ಮತ್ತು ದೇವಸ್ಥಾನ ಕಟ್ಟಡದ ನಡುವಿನ ಸ್ವಲ್ಪ ಜಾಗದಲ್ಲಿ ಪೈಪ್ ಹಾಕುವ ಉದ್ದೇಶದಿಂದ ದೊಡ್ಡ ಗುಂಡಿ ತೆಗೆಯಲು ಹೊರಟಿರುವುದು ಖಂಡನೀಯ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಎಸ್. ಮುಳ್ಳಾಳ, ಯಮನೂರಸಾಬ್ ನದಾಫ್, ಅಪ್ಪಣ್ಣಾ ಕಾಳೆ, ಯಲ್ಲಪ್ಪ ಅಣ್ಣಿಗೇರಿ, ಸುರೇಶ, ಬುದೀಶ್ ಚವ್ಹಾಣ, ಸರಸ್ವತೆವ್ವ, ನಾರಾಯಣ, ರಮೇಶ, ಚಂದ್ರು, ದುರುಗೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-200276801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.