ಗದಗ: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಿ, ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತರರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ಶಾಲೆ–ಕಾಲೇಜು ವಿದ್ಯಾರ್ಥಿಗಳು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

‘ಸೆ. 15ರಂದು ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ ತಾಲ್ಲೂಕಿನಲ್ಲಿ ಮಾನವ ಸರಪಳಿ ಹಾದು ಹೋಗಲಿದೆ. ಪ್ರತಿ ಕಿಲೋ ಮೀಟರ್‌ಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅಂದು ಬೆಳಿಗ್ಗೆ 9.30ಕ್ಕೆ ಎಲ್ಲರೂ ಸರದಿ ಸಾಲಿನಲ್ಲಿ ನಿಂತ ನಂತರ ನಾಡಗೀತೆ ಹಾಡುವುದು, ಸಂವಿಧಾನ ಪೀಠಿಕೆ ಓದುವುದು, ನಂತರ ಮಾನವ ಸರಪಳಿ ಕಾರ್ಯಕ್ರಮ ಜರುಗಲಿದೆ’ ಎಂದು ತಿಳಿಸಿದರು.

‘ಮಾನವ ಸರಪಳಿ ಹಾದುಹೋಗುವ ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡು ಸಂಪೂರ್ಣ ಯೋಜನೆಯ ಜತೆಗೆ ಸೂಕ್ಷ್ಮ ಯೋಜನೆ ತಯಾರಿಸಿ ಮಾನವ ಸರಪಳಿ ಹಾದುಹೋಗುವ ಗ್ರಾಮ ಸೇರಿದಂತೆ 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮಸಭೆಯನ್ನು ನಡೆಸಬೇಕು. ಕಾರ್ಯಕ್ರಮದ ಕುರಿತು ಡಂಗೂರ ಸಾರಬೇಕು. ಕಾರ್ಯಕ್ರಮದ ದಿನದಂದು ಮಾನವ ಸರಪಳಿ ಹಾದು ಹೋಗುವ 10 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಬಿಸಿ ಊಟದ ವ್ಯವಸ್ಥೆ ಮಾಡಿಸಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಪಿಡಿಒ, ನರೇಗಾ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಅವಶ್ಯಕ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಮುಂಡರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಕಾರ್ಯಕ್ರಮ ಸ್ಥಳದಲ್ಲಿ ಸ್ವಚ್ಛತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವತ್ತ ಗಮನ ಹರಿಸಬೇಕು ಎಂದರು.

‘ತಾಲ್ಲೂಕಿನ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ಹಾದು ಹೋಗುವಾಗ ವಾಹನ ದಟ್ಟಣೆ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನಹರಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡು, ಮಾನವ ಸರಪಳಿಯ ಪ್ರಾರಂಭ ಮತ್ತು ಅಂತ್ಯ ಸ್ಥಳವನ್ನು ಗುರುತಿಸಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಮಾತನಾಡಿ, ‘ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಂಪೂರ್ಣ ಬಂದೋಬಸ್ತ್ ಒದಗಿಸಲಾಗುವುದು’ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ‘ಮಾನವ ಸರಪಳಿ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಡಿಕೊಳ್ಳಬೇಕು. ಮಾನವ ಸರಪಳಿಯ ನೋಂದಣಿಗೆ ತಮ್ಮ ಕುಟುಂಬದ ಸದಸ್ಯರು, ನೆರೆಹೊರೆಯವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ https//www. democracydaykarnataka.in/ registrationನಲ್ಲಿ ಆನ್‌ಲೈನ್ ನೋಂದಣಿ ಮಾಡಿಸಿ ಜಿಲ್ಲೆಗೆ ಉತ್ತಮ ಸ್ಥಾನ ತರಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್. ಬಾರಟಕ್ಕೆ, ವಿವಿಧ ತಾಲ್ಲೂಕಿನ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.