ಗದಗ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ದಸರಾ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಯ ಜತೆಗೆ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಕಂದಾಯ ವಸತಿಗೃಹದಲ್ಲಿ ಪೌರಕಾರ್ಮಿಕರ ಜತೆಗೆ ಹಬ್ಬ ಆಚರಿಸಿ ಸರಳತೆ ಮೆರೆದರು. ಅವರಿಗೆ ಹೂವು ಹಣ್ಣು ನೀಡಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಅವರೆಲ್ಲರ ಜತೆಗೆ ಕುಳಿತು ಉಪಾಹಾರ ಸವಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್. ಪೌರಕಾರ್ಮಿಕರ ಜತೆಗೆ ಸಂವಾದ ನಡೆಸಿದರು.

ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿ ಆಚರಿಸಿದ ಈ ಸರಳ ದಸರಾ, ಹಬ್ಬದ ಆನಂದವನ್ನು ಎಲ್ಲರಿಗೂ ಹಂಚಿತು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ, ಆನಂದ ಬದಿ ಸೇರಿದಂತೆ ಹಲವರು ಇದ್ದರು.

ದಸರಾ ಆಚರಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ನೌಕರರು, ಸ್ವಚ್ಚತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಕುಟುಂಬ ಸಮೇತರಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.