ಗದಗ: ‘ಜಿಲ್ಲೆಯಲ್ಲಿ ಡೆಂಗಿ ಸೇರಿದಂತೆ ಇತರೆ ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಡೆಂಗಿ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ಮಲೇರಿಯಾ, ಡೆಂಗಿ, ಚಿಕುನ್ ಗುನ್ಯ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು’ ಎಂದರು.

‘ಸಾರ್ವಜನಿಕ ನಳ ಹಾಗೂ ಕೊಳವೆ ಬಾವಿಗಳಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಸೊಳ್ಳೆ ನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳಲ್ಲಿ ಸಿಂಪಡಿಸಬೇಕು. ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಹೇಳಿದರು.

‘ಘನ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಖಾಲಿ ಟೈರ್ ಮೇಲೆ ತಾಡಪತ್ರಿ ಹಾಕಬೇಕು, ಇಲ್ಲವೇ ವಿಲೇವಾರಿಗೆ ಕ್ರಮ ವಹಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ವೆಂಕಟೇಶ ರಾಠೋಡ ಮಾತನಾಡಿ, ‘ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಮುಂಜಾಗ್ರತಾ ಕ್ರಮಗಳ ತಿಳಿವಳಿಕೆ ಮೂಡಿಸಲಾಗಿದೆ. ಮನೆಗಳ ಮುಂದೆ ನೀರು ನಿಲ್ಲದಂತೆ, ಸ್ವಚ್ಛತೆಗೆ ಆದ್ಯತೆ ನೀಡಲು ತಿಳಿಸಲಾಗಿದೆ. ಕಸ ವಿಲೇವಾರಿ ವಾಹನದ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ವಿವರಿಸಿದರು.

ಡೆಂಗಿ ಜ್ವರ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಸಹಾಯಕ ಕೀಟಶಾಸ್ತ್ರಜ್ಞೆ ಅನ್ನಪೂರ್ಣ ಶೆಟ್ಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಿ.ಸಿ. ಕರಿಗೌಡ್ರ, ಡಾ. ರಾಜೇಂದ್ರ ಬಸರಿಗಿಡದ, ಡಾ.ಅರುಂಧತಿ ಕುಲಕರ್ಣಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-23-382846254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.