ಗದಗ: ವಿಪತ್ತಿನ ಸಂದರ್ಭದಲ್ಲಿ ತತ್ಕ್ಷಣದಲ್ಲೇ ಸರಿಯಾದ ಕ್ರಮ ಕೈಗೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಜನರಿಗೆ ಮನದಟ್ಟು ಮಾಡುವ ಉದ್ದೇಶದಿಂದ ಬುಧವಾರ ನಗರದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆ ಆಯೋಜಿಸಲಾಗಿತ್ತು. ಕಮಲೇಶ್ ಸಿಂಗ್ ನೇತೃತ್ವದ ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡದ ಕಾರ್ಯಚಟುವಟಿಕ ಪ್ರಾತ್ಯಕ್ಷಿಕೆಯ ಪ್ರಮುಖ ಆಕರ್ಷಣೆಯಾಗಿತ್ತು.

ಜಿಲ್ಲಾ ಆಸ್ಪತ್ರೆಯ ಒಂದು ಭಾಗದಲ್ಲಿ ಕಟ್ಟಡ ಕುಸಿದಂತೆ ಅಣಕು ಪರಿಸ್ಥಿತಿ ನಿರ್ಮಿಸಿ, ಅದರೊಳಗೆ ಸಿಲುಕಿರುವವರನ್ನು ರಕ್ಷಿಸುವ ಕಾರ್ಯವನ್ನು ನೈಜ ರೀತಿಯಲ್ಲಿ ಪ್ರದರ್ಶಿಸಲಾಯಿತು.

ತಂಡವು ವಿಶೇಷ ಸಾಧನಗಳನ್ನು ಬಳಸಿ ಅವಶೇಷಗಳೊಳಗಿನ ಜೀವಂತ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸಾಗಿಸುವ ಕ್ರಮಗಳನ್ನು ಹಂತ ಹಂತವಾಗಿ ತೋರಿಸಿತು. ಪ್ರತಿ ಹಂತದಲ್ಲೂ ಸಮಯ ನಿರ್ವಹಣೆ ಮತ್ತು ತಂಡದ ಸಂಯೋಜನೆಯ ಪ್ರಾಮುಖ್ಯತೆ ತಿಳಿಸಿಕೊಡಲಾಯಿತು.

ಇದರ ಜತೆಗೆ, ಪ್ರಾತ್ಯಕ್ಷಿಕೆ ವೇಳೆ ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳನ್ನು ನೀಡಲಾಯಿತು. ಕಟ್ಟಡ ಕುಸಿದಾಗ ಗಾಬರಿ ಪಡದೇ, ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ತಕ್ಷಣ ತುರ್ತು ಸೇವೆಗಳಿಗೂ ಮಾಹಿತಿ ನೀಡಬೇಕು. ಅವಶೇಷಗಳ ಬಳಿ ಅನಗತ್ಯವಾಗಿ ಗುಂಪಾಗದೆ ರಕ್ಷಣಾ ಕಾರ್ಯಕ್ಕೆ ಸಹಕರಿಸಬೇಕು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ವಿಧಾನಗಳ ಕುರಿತು ವಿವರಿಸಲಾಯಿತು.

ತುರ್ತು ಸಂದರ್ಭಗಳಲ್ಲಿ ಬಳಸುವ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಎನ್ಡಿಆರ್ಎಫ್ ತಂಡವು ರಕ್ಷಣಾ ಕಾರ್ಯಗಳಲ್ಲಿ ಬಳಸುವ ವಿವಿಧ ಸಾಧನಗಳನ್ನು ಪರಿಚಯಿಸಿ, ಅವುಗಳನ್ನು ಯಾವ ಸಂದರ್ಭದಲ್ಲಿ ಹೇಗೆ ಬಳಸಬೇಕು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿತು. ಮುಖ್ಯವಾಗಿ ಸ್ಟ್ರೆಚರ್, ಕಟಿಂಗ್ ಟೂಲ್ಗಳು, ರೋಪ್ಗಳು, ಲೈಫ್ ಡಿಟೆಕ್ಷನ್ ಸಾಧನಗಳು ಸೇರಿದಂತೆ ಹಲವಾರು ಉಪಕರಣಗಳ ಬಳಕೆ ಕುರಿತು ವಿವರಿಸಲಾಯಿತು.

ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು.

ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಪ್ರಾಂಶುಪಾಲೆ ರೇಖಾ ಸೋನಾವಣೆ, ವಿಪತ್ತು ತಜ್ಞ ಶಿವಾನಂದ ರಾಜನಾಳ, ವಾರ್ತಾಧಿಕಾರಿ ವಸಂತ ಮಡ್ಲೂರ, ಎನ್ಡಿಆರ್ಎಫ್ ಮುಖ್ಯಸ್ಥ ಕಮಲೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-23-614999329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.