ಗದಗ: ಬೇಸಿಗೆಯ ಈ ದಿನಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಪ್ರಥಮ ಆದ್ಯತೆ ನೀಡಬೇಕು ಎಂದು ರಾಜ್ಯ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗದಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಿಮ್ಮಾಪೂರ ಗ್ರಾಮ ಸೇರಿದಂತೆ ನೀರು ಸರಬರಾಜಿನಲ್ಲಿ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಗ್ರಾಮಗಳು ಹಾಗೂ ವಾರ್ಡ್ಗಳನ್ನು ಗುರುತಿಸಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಇರುವ ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಆರ್ಓ ಘಟಕಗಳ ಸಮರ್ಪಕ ನಿರ್ವಹಣೆ ಕುರಿತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಗದಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ 219 ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ವಿಶೇಷ ಅಭಿಯಾನ ರೂಪಿಸಬೇಕು ಎಂದು ಸೂಚಿಸಿದರು.

ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆ 16ನೇ ಸ್ಥಾನದಲ್ಲಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮಾತನಾಡಿ, ಗದಗ-ಬೆಟಗೇರಿ ನಗರಕ್ಕೆ ಪ್ರತಿ 8 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 123 ಅಪೌಷ್ಟಿಕ ಮಕ್ಕಳು ಗುರುತಿಸಲ್ಪಟ್ಟಿದ್ದಾರೆ. ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಪೌಷ್ಟಿಕ ಆಹಾರ ಹಾಗೂ ಆರೈಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಪಶುಸಂಗೋಪನೆ ಇಲಾಖೆ ಡಿಡಿ ಡಾ. ಎಚ್.ಬಿ. ಹುಲಗಣ್ಣನವರ, ಜಿಲ್ಲೆಯ 31 ಕಡೆ ಮೇವು ಬ್ಯಾಂಕ್ ಆರಂಭಿಸಲು ಸ್ಥಳಗಳನ್ನು ಗುರುತಿಸಲಾಗಿದೆ ಎಂ ದರು.

ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹೆಸರು, ಮುಸುಕಿನ ಜೋಳ ಹಾಗೂ ಸೂರ್ಯಕಾಂತಿ ಪ್ರಮುಖ ಬೆಳೆಗಳಾಗಿವೆ. ಮುಂಗಾರು ಹಂಗಾಮಿನಲ್ಲಿ 3.14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ರೈತರಿಗೆ ಗೊಬ್ಬರ ಹಾಗೂ ಬೀಜ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸೇರಿದಂತೆ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-1518318563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.