ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಫಲಿತಾಂಶ: ಗದಗ ಜಿಲ್ಲೆಗೆ ಕೊನೆಯ ಸ್ಥಾನ

Published 11 ಏಪ್ರಿಲ್ 2024, 6:16 IST
Last Updated 11 ಏಪ್ರಿಲ್ 2024, 6:16 IST
ಅಕ್ಷರ ಗಾತ್ರ

ಗದಗ: ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟ ಆಗಿದ್ದು, ಗದಗ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಿದೆ. 2023–24ನೇ ಸಾಲಿನಲ್ಲಿ ಗದಗ ಜಿಲ್ಲೆ ಶೇ 72.86 ಫಲಿತಾಂಶ ದಾಖಲಿಸಿದ್ದು, ಶೈಕ್ಷಣಿಕ ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಪಟ್ಟಿಯಲ್ಲಿ 32ನೇ ಸ್ಥಾನದಲ್ಲಿದೆ.

ಕಳೆದ ಮೂರು ವರ್ಷಗಳ ಅಂಕಿ ಅಂಶಗಳನ್ನು ಗಮನಿಸಿದಾಗ ಜಿಲ್ಲೆಯ ಪಿಯು ಫಲಿತಾಂಶ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಬಂದಿರುವುದು ಗೊತ್ತಾಗುತ್ತದೆ. ಶಾಲಾ ಶಿಕ್ಷಣ ಇಲಾಖೆಯು (ಪದವಿಪೂರ್ವ) ನಡೆಸಿದ ಯಾವುದೇ ಪ್ರಯತ್ನಗಳು ಜಿಲ್ಲೆಯ ಫಲಿತಾಂಶ ಸುಧಾರಣೆ ಮಾಡಲು ನೆರವಾಗಿಲ್ಲದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತದೆ.

2023–24ನೇ ಸಾಲಿನಲ್ಲಿ ಗದಗ ಜಿಲ್ಲೆಯಿಂದ ಒಟ್ಟು 10,670 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇದರಲ್ಲಿ 4,834 ಮಂದಿ ವಿದ್ಯಾರ್ಥಿಗಳು, 5,836 ಮಂದಿ ವಿದ್ಯಾರ್ಥಿನಿಯರು ಇದ್ದರು. ಈ ಪೈಕಿ, 7,774 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 72.86 ಫಲಿತಾಂಶ ದಾಖಲಾಗಿದೆ. 2022–23ನೇ ಸಾಲಿನಲ್ಲಿ ಗದಗ ಜಿಲ್ಲೆ ಶೇ 66.91 ಫಲಿತಾಂಶ ದಾಖಲಿಸಿ, 30ನೇ ಸ್ಥಾನದಲ್ಲಿತ್ತು. 2021–22ನೇ ಸಾಲಿನಲ್ಲಿ 29ನೇ ಸ್ಥಾನದಲ್ಲಿತ್ತು.

‘ಈ ಬಾರಿಯ ಪಿಯು ಫಲಿತಾಂಶದಲ್ಲಿ ಗದಗ ಜಿಲ್ಲೆ 32ನೇ ಸ್ಥಾನದಲ್ಲಿದೆ. ಆದರೆ, 2022–23ನೇ ಸಾಲಿನ ಫಲಿತಾಂಶಕ್ಕೆ ಹೋಲಿಕೆ ಮಾಡಿ ನೋಡಿದಲ್ಲಿ, ಶೇ 5.95ರಷ್ಟು ಹೆಚ್ಚಿನ ಫಲಿತಾಂಶ ಲಭಿಸಿದೆ’ ಎಂದು ಗದಗ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಜಿ.ಎನ್‌.ಕುರ್ತಕೋಟಿ ತಿಳಿಸಿದ್ದಾರೆ.

‘ಜಿಲ್ಲೆಯ ಫಲಿತಾಂಶ ಸುಧಾರಣೆಗಾಗಿ ಆರು ತಿಂಗಳು ಮುಂಚಿನಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು, ಕಠಿಣ ವಿಷಯಗಳನ್ನು ಸರಳೀಕರಣಗೊಳಿಸಲು ವಿಶೇಷ ವರ್ಗ ಮತ್ತು ತರಬೇತಿ ಶಿಬಿರ, ಕಾರ್ಯಾಗಾರಗಳನ್ನು ಆಯೋಜಿಸಲಾಗಿತ್ತು. ಆದರೂ, ಅಂದು ಕೊಂಡಷ್ಟರ ಮಟ್ಟಿಗೆ ಫಲಿತಾಂಶ ಸಿಕ್ಕಿಲ್ಲ. ಉಪನ್ಯಾಸಕರ ಕೊರತೆ ಫಲಿತಾಂಶ ಕುಸಿತಕ್ಕೆ ಮುಖ್ಯ ಕಾರಣ. ಆದರೂ, ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ ತರಲು ಶ್ರಮ ಮೀರಿ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT