ಗದಗ: ‘ಜನರಿಂದಲೇ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಆಡಳಿತ ರೂಪಿಸಲು ಜಿಲ್ಲಾ ಯೋಜನಾ ಸಮಿತಿ ರಚಿಸಿರುವುದು ಐತಿಹಾಸಿಕ ಕ್ರಮವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಪಂಚಾಯತ್ ರಾಜ್ ಕಾನೂನು ಅನುಷ್ಠಾನ ಮಾಡುವಲ್ಲಿ ನಮ್ಮ ಜಿಲ್ಲೆ ದಿಟ್ಟತನದ ಹೆಜ್ಜೆ ಇಟ್ಟಿದೆ. ಯೋಜನಾ ಸಮಿತಿ ರೂಪಿಸುವ ಕುರಿತು ಪ್ರತಿ ಗ್ರಾಮಗಳಿಗೆ ತೆರಳಿ ಸಭೆಗಳನ್ನು ಮಾಡಲಾಗಿದೆ. ಜನರ ಕಲ್ಯಾಣಕ್ಕಾಗಿ ಯೋಜನಾ ಸಮಿತಿ ಬಹು ದೊಡ್ಡ ಕೆಲಸ ಮಾಡಲಿದೆ’ ಎಂದರು.

‘ಈ ಯೋಜನೆ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ ತೋರಿಸಬೇಕು. ಇದು ಪ್ರಾರಂಭದ ಹಂತವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಬೇಕು. ಜನರ ಆಲೋಚನೆಗಳಿಗೆ ಸ್ಫೂರ್ತಿ ತುಂಬುವುದು ಬಹುಮುಖ್ಯವಾಗಿದೆ. ಮುಂದಿನ ಆಯವ್ಯಯ ತಯಾರಿಕೆಗೆ ಈ ಯೋಜನೆ ಸಹಕಾರಿಯಾಗಲಿದೆ’ ಎಂದರು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಮುಖಂಡರಾದ ಎಲ್.ಡಿ. ಚಂದಾವರಿ, ಕೃಷ್ಣ ಪರಾಪುರ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-23-2123006760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.