ಗದಗ: ‘ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ರೀತಿ ಸಮಸ್ಯೆಗಳು ಎದುರಾಗಬಾರದು. ಈ ನಿಟ್ಟಿನಲ್ಲಿ ಪ್ರಥಮಾದ್ಯತೆ ಮೇರೆಗೆ ನೀರು ಪೂರೈಸಲು ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಯುದ್ಧೋಪಾದಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲು ತಯಾರಿ ಮಾಡಿಟ್ಟುಕೊಳ್ಳಬೇಕು. ಈಗಿರುವ ಬೋರ್ವೆಲ್ಗಳನ್ನು ರಿಪೇರಿ ಮಾಡಿಸಿ, ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು’ ಎಂದರು.

‘ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು ಚಿಕ್ಕಮಕ್ಕಳಿಗೆ ಬಿಸಿಲಿನ ತಾಪಮಾನದಿಂದ ಆರೋಗ್ಯ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕು’ ಎಂದು ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿ, ‘ಬೇಸಿಗೆ ದಿನಗಳಲ್ಲಿ ಹೀಟ್ವೇವ್ನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ’ ಎಂದರು.ಜಿಲ್ಲೆಯ ಜಿಗಳೂರು ಗ್ರಾಮದ ಹತ್ತಿರ ನಿರ್ಮಿಸಿರುವ ಜಲಸಂಗ್ರಹಗಾರ ಕೆರೆಯ ಸದ್ಯ ನೀರಿನ ಸಂಗ್ರಹಣಾ ಸಾಮರ್ಥ್ಯ 2510 ಎಂಎಲ್ಡಿ (0.08 ಟಿಎಂಸಿ ಅಡಿ) ಇದೆ. ಈ ನೀರು ರೋಣ, ಗಜೇಂದ್ರಗಡ ಮತ್ತು ನರೇಗಲ್ ಪಟ್ಟಣಗಳಿಗೆ 7 ತಿಂಗಳಿಗೆ ಸಾಕಾಗುತ್ತದೆ. ನವಿಲು ತೀರ್ಥ ಡ್ಯಾಂನಲ್ಲಿ (ಲೈವ್ ಸ್ಟೋರೇಜ್ ) 8.259 ಟಿಎಂಸಿ ಅಡಿ ನೀರು, ಭದ್ರಾ ಡ್ಯಾಂನಲ್ಲಿ (ಲೈವ್ ಸ್ಟೋರೇಜ್) 25.548 ಟಿಎಂಸಿ ಅಡಿ ನೀರು, ಸಿಂಗಟಾಲೂರು ಬ್ಯಾರೇಜ್ನಲ್ಲಿ (ಲೈವ್ ಸ್ಟೋರೇಜ್) 1.828 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಪ್ರಸ್ತುತ ಲಭ್ಯವಿರುವ ನೀರು ಮುಂದಿನ 72 ದಿನಗಳಿಗೆ ಸಾಕಾಗಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಡಿಸಿಎಫ್ ಸಂತೋಷ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಡಿವೈಎಸ್ಪಿ ಮಹಾಂತೇಶ ಸಜ್ಜನರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-23-876494129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.