ಗದಗ: ಜಿಲ್ಲೆಯಲ್ಲಿ ನಿರಂತರವಾಗಿ ಗಾಂಜಾ ಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದ ಬೆಟಗೇರಿಯ ಗಣೇಶ ನಗರದ ಮಾರುತಿ ಶೇಖಪ್ಪ ಕಾಳೆ ವಿರುದ್ಧ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

ಆರೋಪಿ ವಿರುದ್ಧ ಎನ್ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿ, ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ.

ಆರೋಪಿ ಮಾರುತಿ ಕಾಳೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಗಾಂಜಾದಂತಹ ಅಪಾಯಕಾರಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಿ, ಲಾಭ ಗಳಿಸುವುದನ್ನು ರೂಢಿ ಮಾಡಿಕೊಂಡಿದ್ದ. ಯುವಕನಿರುವಾಗಲೇ ಗಾಂಜಾ ಮಾರಾಟ ಮಾಡಲು ಪ್ರಾರಂಭಿಸಿದ್ದ. ಇವನ ಮೇಲೆ ಪ್ರಕರಣ ದಾಖಲಿಸಿ, ಗಡಿಪಾರು ಕೂಡ ಮಾಡಲಾಗಿತ್ತು. ಆದರೂ, ತಿದ್ದಿಕೊಳ್ಳದೇ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದ. ಅನಕ್ಷರಸ್ಥ, ಬಡವರು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 2017ರ ಜೂನ್ 16ರಂದು ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ₹1,600 ಮೌಲ್ಯದ 160 ಗ್ರಾಂ ಗಾಂಜಾ ಸಾಗಣೆ, ಮಾರಾಟ ಕುರಿತಂತೆ ಮೊಟ್ಟಮೊದಲ ಬಾರಿಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ 2019ರ ಜುಲೈ 20ರಂದು ₹8,400 ಮೌಲ್ಯದ 280 ಗ್ರಾಂ ಗಾಂಜಾ, 2021ರ ಜುಲೈ 30ರಂದು ₹10,300 ಮೌಲ್ಯದ 1,030 ಗ್ರಾಂ ಗಾಂಜಾವನ್ನು ಸಾಗಣೆ ಮಾಡುವಾಗ ಸಿಕ್ಕಿಬಿದ್ದು, ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-23-114538593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.