ಗದಗ: ‘ಶಿಕ್ಷಣವು ವ್ಯಕ್ತಿತ್ವವನ್ನು ವಿಕಸನಗೊಳಿಸಿ ಅತ್ಯುನ್ನತ ಸ್ಥಾನಕ್ಕೇರಿಸುತ್ತದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗಬೇಕು’ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಹೇಳಿದರು.

ಗದಗ ಎಪಿಎಂಸಿಯ ಹಮಾಲರ ವಿಶ್ರಾಂತಿ ಗೃಹದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎಪಿಎಂಸಿ ಹಮಾಲರು ಹಾಗೂ ಚಕ್ಕಡಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ದಿಸೆಯಲ್ಲಿಯೇ ಕಷ್ಟಪಟ್ಟು ಅಭ್ಯಾಸ ಮಾಡಬೇಕು. ಗುರಿ ಇಟ್ಟುಕೊಂಡು ಅದನ್ನು ಸಾಧಿಸುವ ನಿಟ್ಟಿಯಲ್ಲಿ ಪ್ರಯತ್ನಿಸಬೇಕು’ ಎಂದು ತಿಳಿಸಿದರು.

ಶಿಕ್ಷಕ ಎಸ್. ಎನ್. ಬಳ್ಳಾರಿ ಮಾತನಾಡಿ, ‘ವಿದ್ಯಾರ್ಥಿಗಳು ಅಂಬೇಡ್ಕರರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಮತ್ತು ಹೋರಾಟ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಶಿಕ್ಷಣವು ಕೇವಲ ಉದ್ಯೋಗ ಪಡೆಯಲು ಮಾತ್ರವಲ್ಲ. ಬದಲಿಗೆ ವ್ಯಕ್ತಿತ್ವ ವಿಕಸನ, ಸಾಮಾಜಿಕ ಬದಲಾವಣೆ ಮತ್ತು ಜನ್ಮಸಿದ್ಧ ಹಕ್ಕುಗಳನ್ನು ಪಡೆಯುವ ಅಸ್ತ್ರವಾಗಿದೆ’ ಎಂದರು.

ಕರ್ನಾಟಕ ರಾಜ್ಯ ಹಮಾಲರ ಒಕ್ಕೂಟದ ರಾಜ್ಯಘಟಕದ ಅಧ್ಯಕ್ಷ ಅಯ್ಯಪ್ಪ ನಾಯ್ಕರ ಮಾತನಾಡಿ, ‘ಹಮಾಲರ ಮತ್ತು ಚಕ್ಕಡಿಯವರ ಮಕ್ಕಳು ಶಿಕ್ಷಣ ಪಡೆದು ಆದರ್ಶ ವ್ಯಕ್ತಿಗಳಾಗಬೇಕು. ಪೋಷಕರನ್ನು ಗೌರವಿಸಬೇಕು. ಇಳಿ ವಯಸ್ಸಿನಲ್ಲಿ ಜೋಪಾನ ಮಾಡುವ ಸಂಸ್ಕಾರ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಆದಪ್ಪ ಮಾರೆಪ್ಪನವರ ಮಾತನಾಡಿದರು. ಕಾರ್ಯದರ್ಶಿ ಇಮಾಮಸಾಬ ರೋಣದ, ಉಪಾಧ್ಯಕ್ಷ ಮುಕ್ತುಮ್ಸಾಬ ನಾಗನೂರ, ಖಜಾಂಚಿ ಶಂಕ್ರಪ್ಪ ಯರಗುಡಿ, ಇಮಾಮಹುಸೇನ ರೋಣದ, ಗೋವಿಂದಪ್ಪ ಮುಂಡರಗಿ, ಎಪಿಎಂಸಿ ಕಾರ್ಯದರ್ಶಿ ಸುವರ್ಣಾ ವಾಲೀಕಾರ, ಉಪ ಕಾರ್ಯದರ್ಶಿ ಎಂ.ಆರ್.ನದಾಫ, ವಿರುಪಾಕ್ಷಪ್ಪ ಪಾಲ್ತಿ, ರಾಜೇಸಾಬ ಕಣವಿ, ಮಹ್ಮದ್ಸಾಬ ವಾಲಿಕಾರ, ಶೇಖಪ್ಪ ಮುಳವಾಡ, ಹುಸೇನಸಾಬ ವಡವಿ, ಹನಮವ್ವ ತುಮ್ಮರಮಟ್ಟಿ, ಮಲ್ಲವ್ವ ಸಣ್ಣಕ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-1025005923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.