ಗದಗ: ಎಫ್ಐಡಿ ಮೂಲಕ ರೈತರಿಗೆ ರಸಗೊಬ್ಬರ ವಿತರಣೆ ಮಾಡುವ ಪದ್ಧತಿ ರದ್ದು ಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಮುಖಂಡ ಶಂಕರಗೌಡ ಜಯನಗೌಡರ ಮಾತನಾಡಿ, ‘ರೈತರಿಗೆ ನೇರವಾಗಿ ರಸಗೊಬ್ಬರವನ್ನು ಪೂರೈಕೆ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವ ಕೇಂದ್ರಗಳನ್ನು ವರ್ಷ ಪೂರ್ತಿ ತೆರೆಯಬೇಕು. ರೈತರ ಅನುಕೂಲಕ್ಕಾಗಿ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸಬೇಕು’ ಎಂದು ಆಗ್ರಹಿಸಿದರು.

‘ದೇಸಿ ಹಸು ಸಾಕಣೆ ಮಾಡುವ ರೈತರಿಗೆ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹಧನ ನೀಡಬೇಕು. ರೈತರ ಬೆಳೆಗಳನ್ನು ನಾಶಪಡಿಸುತ್ತಿರುವ ಮಂಗಗಳು ಮತ್ತು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮವಹಿಸಬೇಕು. ಅವುಗಳನ್ನು ಸೆರೆಹಿಡಿದು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು. ಸ್ಯಾಟಲೈಟ್ ಮತ್ತು ಬಯೋಮೆಟ್ರಿಕ್ ಸರ್ವೇ ಮೂಲಕ ವೈಜ್ಞಾನಿಕ ರೀತಿಯಲ್ಲಿ ಬೆಳೆಹಾನಿ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಬೆಳೆವಿಮೆ ಮಂಜೂರು ಮಾಡಲು ಸರ್ಕಾರ ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘಟನೆಯ ಪದಾಧಿಕಾರಿಗಳಾದ ಮಹಾದೇವ ವೇರ್ಣೇಕರ, ಆದೇಶ ಹುಲಗೂರು, ಗೂಳಪ್ಪ ಗುಡದೂರ, ಗಿರೀಶ ಹೊಸಮನಿ, ಅಂದಪ್ಪ ಅಂಗಡಿ, ರಾಮಣ್ಣ ಕಮ್ಮಾರ, ಶಂಕರಗೌಡ ಪಾಟೀಲ, ಶಿವಮೂರ್ತಿ ದೊಡ್ಡವಾಡ, ರಾಮನಗೌಡ ಪಾಟೀಲ, ಪ್ರವೀಣ ಕರ್ಣೆ, ಪ್ರಕಾಶ ಹಡಗಲಿ, ರವಿ ವಗ್ಗಣ್ಣವರ, ಬಸವರಾಜ ಮರಾಠಿ, ಸಂತೋಷ ಮಠದ, ಮಲ್ಲಪ್ಪ ಮಠದ ಸೇರಿದಂತೆ ಸಂಘಟನೆಯ ಸದಸ್ಯರು ಮತ್ತು ರೈತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-23-696604740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.