ಗದಗ: ಜಿಲ್ಲೆಯ ಐವರು ರೌಡಿ ಶೀಟರ್ಗಳನ್ನು ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಕೊಲೆ ಪ್ರಯತ್ನ, ಗಾಂಜಾ ಮಾರಾಟದಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ದವನಪ್ಪ, ದಾವಲ್ಸಾಬ್, ಮುಸ್ತಾಕ್, ಅಭಿಷೇಕ, ಸಾಹಿಲ್ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಸುಧಾರಣೆಗೆ ಅವಕಾಶ ಇದ್ದರೂ, ಅವರು ಮತ್ತೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿದ್ದರಿಂದ ಗಡೀಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿ ದವನಪ್ಪ ವಿರುದ್ಧ ನರಗುಂದ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರು ದೂರುಗಳು ದಾಖಲಾಗಿದ್ದವು. ಅದೇ ರೀತಿ, ದಾವಲ್ಸಾಬ್ ವಿರುದ್ಧ ನರಗುಂದ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು, ಮುಸ್ತಾಕ್ ವಿರುದ್ಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು, ಅಭಿಷೇಕ್ ಮತ್ತು ಸಾಹಿಲ್ವಿರುದ್ಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿಸಿದರು.

‘ಸಾಮಾಜಿಕ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಪರಾಧಿಕ ಹಿನ್ನಲೆಯುಳ್ಳ ಐವರು ರೌಡಿ ಶೀಟರ್ಗಳನ್ನು ಗಡಿಪಾರು ಮಾಡುವಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದ ಪ್ರಸ್ತಾವ ಸಲ್ಲಿಕೆಯಾಗಿದ್ದವು. ಅವುಗಳ ವಿಚಾರಣೆ ನಡೆಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಐವರು ರೌಡಿ ಶೀಟರ್ಗಳನ್ನು ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಿ ಆದೇಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-23-1478621541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.