ಗದಗ: ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲ್ಲೂಕು ಅಗ್ರಸ್ಥಾನ ಪಡೆದಿದ್ದರೂ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಇನ್ನೂ ಹೆಚ್ಚಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಮುಖ್ಯ’ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಕಚೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಜನೆಯ ಶೇ 100 ಪ್ರಗತಿ ಸಾಧನೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾದವರನ್ನು ಗುರುತಿಸಿ, ಮಾಹಿತಿ ಒದಗಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.

ನಗರದ 1ರಿಂದ 35 ವಾರ್ಡ್ಗಳಲ್ಲಿ ಯೋಜನೆಯ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು. ಇದಕ್ಕೆ ನಗರಸಭೆಯ ಸದಸ್ಯರು, ಅಧಿಕಾರಿಗಳು ಮತ್ತು ಸಮಿತಿ ಸದಸ್ಯರ ಸಹಕಾರ ನೀಡಬೇಕು ಎಂದರು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲೀಕರಿಸುವ ಉದ್ದೇಶ ಹೊಂದಿವೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯುವಲ್ಲಿ ವಿಳಂಬ ಆಗಬಾರದು. ಪ್ರತಿ ವಾರ್ಡ್ಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಬೇಕು ಎಂದರು.

‘ಗೃಹಲಕ್ಷ್ಮಿ ಯೋಜನೆ ಅಡಿ ಜುಲೈ 2025ರವರೆಗೆ ಗದಗ ತಾಲ್ಲೂಕಿನಲ್ಲಿ ಯಜಮಾನಿ ಹೆಸರಿನಲ್ಲಿ ಒಟ್ಟು 82,193 ಜನರು ಪಡಿತರ ಚೀಟಿ ಹೊಂದಿದ್ದಾರೆ. 81,967 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 78,986 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 96.36ರಷ್ಟು ಪ್ರಗತಿ ಸಾಧಿಸಲಾಗಿದೆ’ ಎಂದರು.

ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಗತಿ ಸಾಧಿಸಲು ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ.ರೇವಣ್ಣ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸಚಿವ ಎಚ್.ಕೆ.ಪಾಟೀಲ ಅವರ ಮಾರ್ಗದರ್ಶನ ನೆರವಾಗಿದೆ
ಅಶೋಕ ಮಂದಾಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಶೇ 100 ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ವಾರ್ಡ್ಗಳಲ್ಲಿ ಪ್ರಚಾರ ಮಾಡುವ ಮೂಲಕ ಸೌಲಭ್ಯ ವಂಚಿತರನ್ನು ಗುರುತಿಸಲು ನೆರವಾಗಬೇಕು
ಕೃಷ್ಣಗೌಡ ಎಚ್.ಪಾಟೀಲ ಸಮಿತಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.