ಗದಗ: ‘ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು. ಜತೆಗೆ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಪ್ರತಿ ತಾಲ್ಲೂಕುಗಳಲ್ಲಿಯೂ ಗ್ಯಾರಂಟಿ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಯೋಜನೆಗಳ ಅನುಷ್ಠಾನಕ್ಕಾಗಿ ಅಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿನ ಬಸ್ನಿಲ್ದಾಣಗಳು ಸ್ವಚ್ಛವಾಗಿರುವಂತೆ ಕ್ರಮವಹಿಸಬೇಕು. ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳು ಚೆನ್ನಾಗಿಡಬೇಕು ಎಂದು ತಿಳಿಸಿದರು.

ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ‘ಗೃಹಲಕ್ಷ್ಮಿ ಯೋಜನೆ ಸೌಲಭ್ಯದಿಂದ ಯಾವುದೇ ಫಲಾನುಭವಿ ವಂಚಿತರಾಗಬಾರದು. ಈ ಯೋಜನೆಯ ಹಣ ಅರ್ಹ ಫಲಾನುಭವಿಗಳಿಗೆ ತಲುಪಿರುವ ಕುರಿತು ಸಮೀಕ್ಷೆ ನಡೆಸಬೇಕು. ಅನ್ನಭಾಗ್ಯ ಯೋಜನೆಯ ಸೌಲಭ್ಯ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು. ಕೆಎಸ್ಆರ್ಟಿಸಿ ಎಲ್ಲ ಘಟಕಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಮುಖ್ಯಸ್ಥರು ಅವುಗಳ ಸಮರ್ಪಕ ಅನುಷ್ಟಾನದ ಕುರಿತು ಪರಾಮರ್ಶೆ ನಡೆಸಬೇಕು. ಅರ್ಹರಿಗೆ ಯೋಜನೆಗಳ ಸೌಲಭ್ಯ ನಿಗದಿತ ಅವಧಿಯೊಳಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕು. ಸರ್ಕಾರದ ಸೌಲಭ್ಯಗಳ ಮೂಲಕ ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ದೀಪಕ ಲಮಾಣಿ ಮಾತನಾಡಿ, ‘ಶಕ್ತಿ ಯೋಜನೆ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಪ್ರಯಾಣಿಕರಿಗೆ ಕಿರಿಕಿರಿರಹಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಸ್ಕಾಂನಿಂದ ವಿದ್ಯುತ್ ಕಂಬಗಳ ಅಳವಡಿಕೆ, ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕುರಿತು ಚರ್ಚೆ ನಡೆಯಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಉಪಾಧ್ಯಕ್ಷರಾದ ಹೇಮಂತಗೌಡ ಪಾಟೀಲ, ಪಿ.ಬಿ.ಅಳಗವಾಡಿ, ಫಕ್ರುಸಾಬ ಚಿಕ್ಕಮಣ್ಣೂರ, ಸದಸ್ಯರಾದ ಸಂಗನಗೌಡ ಪಾಟೀಲ, ಶರೀಫ್ ಬಿಳೆಎಲಿ, ವಿವೇಕ ಯಾವಗಲ್, ದೇವಪ್ಪ ಮುರ್ನಾಳ, ಪುಲಿಕೇಶಿಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಈಶಣ್ಣ ಹುನಸಿಕಟ್ಟಿ, ವೀರಯ್ಯ ಮಠಪತಿ, ಆರ್.ಆರ್. ಗಡ್ಡದೇವರಮಠ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಚಳಗೇರಿ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-1267672651

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.