ಮುಂಡರಗಿ: ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಮೇ 22ರಂದು ಕೈಗೊಂಡಿದ್ದ ಜನಕಲ್ಯಾಣ ಯಾತ್ರೆಯು ಯಶಸ್ವಿಯಾಗಿದ್ದು, ಸರ್ಕಾರ ಶೀಘ್ರದಲ್ಲಿಯೇ ನಮ್ಮ ಬೇಡಿಕೆ ಈಡೇರಿಸುವ ಸಾಧ್ಯತೆ ಇದೆ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ನೂತನ ರೈಲು ಮಾರ್ಗ ಹೋರಾಟ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಬಸವರಾಜ ನವಲಗುಂದ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಗದಗ– ಹರಪನಹಳ್ಳಿ ಮಾರ್ಗವಾಗಿ ನೂತನ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ವಿವಿಧ ಸಂಘಟನೆಗಳ ಕಾರ್ಯಕರ್ತರೊಂದಿಗೆ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಕಳೆದ ಬಜೆಟ್ನಲ್ಲಿ ನೂತನ ರೈಲು ಮಾರ್ಗ ಸಮೀಕ್ಷೆಗೆ ಹಸಿರು ನಿಶಾನೆ ದೊರೆತಿದ್ದು, ನಮ್ಮ ಬೇಡಿಕೆ ಈಡೆರುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೂತನ ರೈಲು ಮಾರ್ಗಕ್ಕೆ ಆಗ್ರಹಿಸಿ ಗದಗ, ಹುಬ್ಬಳ್ಳಿ, ಬೆಂಗಳೂರು, ದೆಹಲಿ, ವಾರಾಣಸಿ, ರಾಮೇಶ್ವರ ಮೊದಲಾದ ಭಾಗಗಳಲ್ಲಿ ಹಲವಾರು ಬಾರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ವಿವಿಧ ಸಂಘಟನೆಗಳು ನಮ್ಮ ಹೋರಾಟಕ್ಕೆ ಕೈಜೋಡಿಸಿವೆ. ನೂತನ ರೈಲು ಮಾರ್ಗ ಮಂಜೂರಿ ಮಾಡಬೇಕು ಎಂದು ರಾಜ್ಯ ರೈಲ್ವೆ ಸಚಿವರು ಸೇರಿದಂತೆ ಹಲವಾರು ಹಂತಗಳ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಮೇ 22ರಂದು ಮುಂಡರಗಿಯಿಂದ ಹೊರಟ ಜನಕಲ್ಯಾಣ ಯಾತ್ರೆಯು ಮೇ 24ರಂದು ವಾರಾಣಸಿ ತಲುಪಿ, ಅಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನೂತನ ರೈಲು ಮಾರ್ಗ ಮಂಜೂರಾಗಲಿ ಎಂದು ಮೇ 25ರಂದು ವಾರಾಣಸಿಯ ಕಾಶೀ ವಿಶ್ವನಾಥ ಹಾಗೂ ಮತ್ತಿತರ ಮಂದಿರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಯಾತ್ರೆ ಯಶಸ್ವಿಯಾದ ಪ್ರಯುಕ್ತ ಜೂನ್ 8ರಂದು ಇಲ್ಲಿಯ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮುಖಂಡರಾದ ದ್ರುವಕುಮಾರ ಹೂಗಾರ, ರವಿಗೌಡ ಪಾಟೀಲ, ಸುರೇಶ ಕುಂಬಾರ, ಲಕ್ಷ್ಮಿಬಾಯಿ ಯರಾಸಿ, ಸುಮಂಗಲಾ ಸಣ್ಣಯರಾಸಿ, ಮಂಜುಳಾ ಪೊಲೀಸ್ಪಾಟೀಲ ಸೇರಿದಂತೆ ಒಟ್ಟು 110 ಜನರು ಜನಕಲ್ಯಾಣ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-23-389543999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.