ಮುಂಡರಗಿ: ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಸಮೀಕ್ಷೆಗೆ ಕೇಂದ್ರವು ಹಸಿರು ನಿಶಾನೆ ತೋರಿಸಿರುವ ಕ್ರಮವನ್ನು ಸ್ವಾಗತಿಸಿ ತಾಲ್ಲೂಕು ರೇಲ್ವೆ ಹೋರಾಟ ಸಮಿತಿಯ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಸಂಭ್ರಮಾಚರಣೆ ನಡೆಸಿದರು.

ತಾಲ್ಲೂಕು ರೇಲ್ವೆ ಹೋರಾಟ ಸಮಿತಿಯ ಮುಖಂಡ ಬಸವರಾಜ ನವಲಗುಂದ ಮಾತನಾಡಿ, ಗದಗ-ಹರಪನಹಳ್ಳಿ ನೂತನ ರೈಲು ಮಾರ್ಗ ಮಂಜೂರಾತಿಗಾಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಹಾಗೂ ನೂತನ ರೈಲು ಮಾರ್ಗ ಜಂಟಿ ಹೋರಾಟ ಸಮಿತಿ ಕಾರ್ಯಕರ್ತರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಲಿದ್ದರು. ಹಲವು ಕಾರಣಗಳಿಂದ ಅದು ನನೆಗುದಿಗೆ ಬಿದ್ದಿತ್ತು. ಈಗ ಕೇಂದ್ರ ಸರ್ಕಾರ ನೂತನ ರೈಲು ಮಾರ್ಗ ಸಮಿಕ್ಷೆಗೆ ಹಸಿರು ನಿಶಾನೆ ತೋರಿಸಿರುವುದು ಸ್ವಾಗತಾರ್ಹ ಎಂದು ಹರ್ಷ ವ್ಯಕ್ತಪಡಿಸಿದರು.

ರೈಲ್ವೆ ಮಾರ್ಗ ರಚನೆಯ ಜಂಟಿ ಕ್ರಿಯಾ ಸಮೀತಿ ಪ್ರಧಾನ ಕಾರ್ಯದರ್ಶಿ ದ್ರುವಕುಮಾರ ಹೂಗಾರ, ಬಸಪ್ಪ ವಡ್ಡರ, ವಿಜಯಕುಮಾರ ಡಂಬಳ, ಅಂದಯ್ಯ ಹಿರೇಮಠ, ಶೇಖರಯ್ಯ ಹೈತಾಪೂರ, ನಜೀರ ಅಳವಂಡಿ, ನಜೀರಸಾಬ ಕೇಲೂರ, ರಾಜಾಭಕ್ಷಿ ಬೇಟಗೇರಿ, ರವಿಗೌಡ ಪಾಟೀಲ, ದ್ಯಾಮಣ್ಣ ವಾಲೀಕಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-23-48924975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.