ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಡರಗಿ | ನಿರಂತರ ಮಳೆ: ಬೆಳೆ ಜಲಾವೃತ

Published : 23 ಜುಲೈ 2023, 13:45 IST
Last Updated : 23 ಜುಲೈ 2023, 13:45 IST
ಫಾಲೋ ಮಾಡಿ
Comments

ಮುಂಡರಗಿ: ಪಟ್ಟಣವು ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಮತ್ತು ಭಾನುವಾರ ಉತ್ತಮ ಮಳೆ ಸುರಿದಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಬೆಳಗ್ಗೆ ತಾಲ್ಲೂಕಿನ ಕೊರ್ಲಹಳ್ಳಿ, ಗಂಗಾಪುರ, ಶೀರನಹಳ್ಳಿ, ಶಿಂಗಟಾಲೂರು, ಹಮ್ಮಿಗಿ, ಗುಮ್ಮಗೋಳ, ಬಿದರಳ್ಳಿ, ಮುಂಡವಾಡ, ಮುರುಡಿ, ಕೆಲೂರು ಮೊದಲಾದ ಗ್ರಾಮಗಳಲ್ಲಿ ಮಳೆಯಾಗಿದೆ.

ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಸಂತಸ ತಂದಿದೆ. ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಗ್ರಾಮೀಣ ಭಾಗದ ರಸ್ತೆಗಳೆಲ್ಲ ಕೆಸರುಮಯವಾಗಿವೆ. ರಸ್ತೆಗಳ ಮಧ್ಯದಲ್ಲಿ ನಿರ್ಮಾಣಗೊಂಡಿರುವ ತಗ್ಗುಗಳಲ್ಲಿ ಮಳೆ ನೀರು ಸಂಗ್ರಹವಾಗಿದೆ. ಇದರಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದೆ.

ನೀರಾವರಿ ಜಮೀನಿನಲ್ಲಿ ಬೆಳೆದಿದ್ದ ಸೂರ್ಯಕಾಂತಿ ಹಾಗೂ ಮೆಕ್ಕೆಜೋಳಕ್ಕೆ ರಸಗೊಬ್ಬರ ನೀಡಲು ಇದು ಸಕಾಲವಾಗಿದ್ದು, ಬಿಡುವಿಲ್ಲದೆ ಮಳೆ ಸುರಿಯುತ್ತಿರುವುದರಿಂದ ರೈತರಿಗೆ ಗೊಬ್ಬರ ನೀಡಲು ಸಾಧ್ಯವಾಗದಂತಾಗಿದೆ. ಸದಾ ಮೋಡ ಕವಿದ ವಾತಾವಣ ಹಾಗೂ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ನೀರಾವರಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.


ಮಳೆಯಿಂದಾಗಿ ತಾಲ್ಲೂಕಿನ ಕೆಲವು ಗ್ರಾಮಗಳ ಜಮೀನುಗಳಲ್ಲಿ ಬೆಳೆಯು ಜಲಾವೃತಗೊಂಡಿದೆ. ಜಮೀನಿನ ಬದುವುಗಳಲ್ಲಿ ಮಳೆ ನೀರು ಸಂಗ್ರಹವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT