ಗದಗ: ನಗರದಲ್ಲಿ ಮೇ 31ರಂದು ನಡೆಯಲಿರುವ ಹಿಂದೂ ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿ ಸಿಪಿಐಎಂ ಕಾರ್ಯಕರ್ತರು ಶನಿವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಯು. ಬಸವರಾಜ ಮಾತನಾಡಿ, ‘ಮನುವಾದಿಗಳು ಮೂಲದಲ್ಲೇ ಅಸಮಾನತೆ, ಜಾತಿ ಅಸ್ಪೃಶ್ಯತೆಯಿಂದ ಕೂಡಿದ ಸಮಾಜವನ್ನು ಕಟ್ಟಿ, ಅದನ್ನು ಪೋಷಿಸಿದರು. ಆ ಸನಾತನವಾದಿಗಳೇ ಇಂದು ಬಿಜೆಪಿ ಮತ್ತು ಸಂಘ ಪರಿವಾರದ ಹೆಸರಿನಲ್ಲಿ ಜಾತಿ, ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅದರ ಮುಂದುವರಿದ ಭಾಗವಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಕನೇರಿಯ ಕಾಡು ಸಿದ್ದೇಶ್ವರ ಸ್ವಾಮೀಜಿಯನ್ನು ಮುಂದಿಟ್ಟುಕೊಂಡು ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ನಡೆಸುತ್ತಿದ್ದಾರೆ. ಸಮಾನತೆ ಮತ್ತು ವಚನ ಚಳವಳಿಯಲ್ಲಿ ನಂಬಿಕೆ ಇಟ್ಟಂತಹ ಗದುಗಿನ ಜನರು ಈ ಸಮಾವೇಶಕ್ಕೆ ಯಾವುದೇ ರೀತಿಯ ಬೆಂಬಲ ನೀಡಬಾರದು’ ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್.ಹಡಪದ ಮಾತನಾಡಿ, ‘ಬೆಲೆ ಏರಿಕೆ, ನಿರುದ್ಯೋಗ, ಹಣದುಬ್ಬರದಿಂದಾಗಿ ಜನಸಾಮಾನ್ಯರು ತೀವ್ರ ಸಂಕಷ್ಟಗಳಿಗೆ ಸಿಲುಕಿದ್ದಾರೆ. ಇದರ ವಿರುದ್ಧ ಜನ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಪ್ರತಿಭಟನೆಯ ಜ್ವಾಲೆಯನ್ನು ಹತ್ತಿಕ್ಕಲು ಬಂಡವಾಳಶಾಹಿ ವ್ಯವಸ್ಥೆ ಕೋಮುವಾದಿ ಶಕ್ತಿಗಳ ಜತೆಗೆ ಕೈಜೋಡಿಸಿ ಧರ್ಮದ ಹೆಸರಿನಲ್ಲಿ ವಿಭಜನಕಾರಿ ನೀತಿಗಳನ್ನು ಮುನ್ನಲೆಗೆ ತಂದು ಧ್ವನಿ ಎತ್ತದಂತೆ ಮಾಡುವ ಸಲುವಾಗಿ ಇಂಥ ಕಾರ್ಯಕ್ರಮಗಳನ್ನು ದೇಶದಲ್ಲೆಡೆ ನಡೆಸುತ್ತಿದೆ’ ಎಂದು ಆರೋಪಿಸಿದರು.

‘ದೇಶದ ಜನತೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಬಂಡವಾಳಶಾಹಿ ಶಕ್ತಿಗಳ ಪರವಾದ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಮುಂದಾಗಬೇಕು’ ಎಂದು ಹೇಳಿದರು.

ಜಿಲ್ಲಾ ಸಮಿತಿ ಸದಸ್ಯರಾದ ಪೀರೂ ರಾಠೋಡ, ಮೈಬು ಹವಾಲ್ದಾರ, ಬಸವರಾಜ ಮಂತೂರ, ಪಕ್ಷದ ಸದಸ್ಯರಾದ ಚಂದ್ರು ರಾಠೋಡ, ಕನಕರಾಯ ಹಾದಿಮನಿ, ದೇವಪ್ಪ, ಗಣೇಶ ರಾಠೋಡ, ಮರಿಯಮ್ಮ ಮುಳುಗುಂದ, ಮಂಜವ್ವ, ಫಕೀರವ್ವ ಪೂಜಾರ, ಶಿವಕ್ಕ ಬೇವಿನಮರದ, ರೇಣುಕಾ ಚಲವಾದಿ, ಸರಸ್ವತಿ ಬಣಕಾರ, ನಾಗರತ್ನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-660430272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.