ಶಿರಹಟ್ಟಿ: ಹಿಂದೂ ಸರ್ವ ಸಮಾಜಗಳ ಒಕ್ಕೂಟದ ವತಿಯಿಂದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಮೇ 31ರಂದು ಗದಗ ನಗರದ ವಿಡಿಎಸ್ಟಿಸಿ ಮೈದಾನದಲ್ಲಿ ನಡೆಯಲಿದ್ದು, ಎಲ್ಲ ಸಮಾಜದ ಹಿಂದೂ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಬೇಕೆಂದು ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.

ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸಮಾವೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಆಗಮಿಸಲಿದ್ದಾರೆ. ಸನಾತನ ಹಿಂದೂ ಧರ್ಮವನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಪಾಠ ಕಲಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸಾವಯವ ಕೃಷಿ ಬಗ್ಗೆ ರೈತರಿಗೆ ಸಲಹೆ ನೀಡಲು ಆಗಮಿಸುತ್ತಿದ್ದು, ಹಿಂದೂಗಳು ಹಾಗೂ ರೈತರು ಈ ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಶ್ರೀಧರ್ ಕುಲಕರ್ಣಿ, ರಾಜೀವರಡ್ಡಿ ಬೊಮ್ಮನಕಟ್ಟಿ,ವೆಂಕಟೇಶ್ ಕುಲಕರ್ಣಿ, ತಿಪ್ಪಣ್ಣ ಕೊಂಚಗೇರಿ, ಯಲ್ಲಪ್ಪಗೌಡ ಅಣ್ಣಿಗೇರಿ , ರಾಮಣ್ಣ ಕಂಬಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-995448859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.