ಮುಳಗುಂದ: ‘ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಧ್ವನಿ ಇಲ್ಲದವರಿಗೆ ಧ್ವನಿಯಾಗಿ, ಶಕ್ತಿ ನೀಡಿದ್ದಾರೆ. ಬುದ್ಧ ಸಮ ಬಾಳು – ಸಮಪಾಲು ಎಂಬ ತತ್ವವನ್ನು ಸಾರಿದರೆ, ಬಸವಣ್ಣನವರು ‘ಇವ ನಮ್ಮವ’ ಎಂಬ ಸಮಾನತೆಯ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಈ ಮಹನೀಯರ ತತ್ವಗಳು ಕೇವಲ ಭಾಷಣಗಳಲ್ಲಿ ಮಾತ್ರ ಉಳಿಯದೇ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಗದಗ ತಾಲ್ಲೂಕಿನ ಹರ್ತಿ ಗ್ರಾಮದಲ್ಲಿ ಈಚೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹಲವರು ಇಂದು ಬುದ್ದ, ಬಸವ ಹಾಗೂ ಅಂಬೇಡ್ಕರ್ ಅವರ ಹೆಸರುಗಳನ್ನು ಕೇವಲ ವೇದಿಕೆ ಭಾಷಣಗಳಿಗೆ ಮಾತ್ರ ಬಳಸುತ್ತಿರುವುದು ವಿಷಾದನೀಯ. ಅವರ ತತ್ವ–ಸಿದ್ಧಾಂತಗಳನ್ನು ಅನುಸರಿಸಿದಾಗ ಮಾತ್ರ ಸಮಾನತೆ, ನ್ಯಾಯ ಮತ್ತು ಸಹಬಾಳ್ವೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹರ್ತಿ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ಸುಸಜ್ಜಿತ ಗೌರವ ಘಟಕ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಶಿವ–ಪಾರ್ವತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಮದಲ್ಲಿ ಸಾರ್ವಜನಿಕ ಸೌಲಭ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಗ್ರಾಮ ಚವಡಿ ಕಟ್ಟಡ ನಿರ್ಮಾಣ, ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಎಸ್.ಎಸ್.ಪಾಟೀಲ, ಅಪ್ಪಣ್ಣ ಇನಾಮತಿ, ಬಸವರಾಜ ಕಡೇಮನಿ, ಸಿಂಗಾಡಿ, ಶರೀಫನವರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಾ. ಜಿನಗಾ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಶಿರೋಳಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-1849833270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.