ಗದಗ: ‘ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದು, ಎಚ್.ಕೆ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಮಂಕಾಳ ವೈದ್ಯ ಅವರನ್ನು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಬೇಕು’ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಟ್ರಸ್ಟ್ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ. ಗಾರವಾಡ ಕೋರಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಂಗಾಮತ ಸಮಾಜದ ತಿಪ್ಪಣ್ಣ ಕಮಕನೂರ ಅವರನ್ನು ಮತ್ತೊಂದು ಬಾರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.

‘ಕೆಲವೇ ವರ್ಷ ವಿಧಾನ ಪರಿಷತ್ ಸದಸ್ಯರಾಗಿದ್ದ ತಿಪ್ಪಣ್ಣ ಕಮಕನೂರ ಅಧಿಕಾರಾವಧಿ ಮೇ 31ಕ್ಕೆ ಕೊನೆಯಾಗಿದೆ. ಆರು ವರ್ಷ ಪೂರ್ಣಾವಧಿಗೆ ಅವರಿಗೆ ಅಧಿಕಾರ ದೊರೆತಿಲ್ಲ’ ಎಂದರು.

ಟ್ರಸ್ಟ್ ಉಪಾಧ್ಯಕ್ಷ ಸಿ.ಬಿ. ಬಾರಕೇರ, ಕಾರ್ಯದರ್ಶಿ ಶ್ರೀಧರ ಸುಲ್ತಾನಪುರ, ನರಗುಂದ ತಾಲ್ಲೂಕು ಘಟಕದ ಅಧ್ಯಕ್ಷ ಗುರಣ್ಣ ಆದಪ್ಪನವರ, ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಜಾಲಗಾರ, ಟ್ರಸ್ಟಿ ಮಂಜುನಾಥ, ಚಂದ್ರಶೇಖರ ಪೂಜಾರ, ಮಹಾಂತೇಶ ಬಾರಕೇರ, ಪರಶುರಾಮ ಬಾರಕೇರ, ಶರಣಪ್ಪ ಬಾರಕೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-23-500700775

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.