ಗದಗ: ‘ಗದಗ ಬೆಟಗೇರಿ ಹೋಟೆಲ್ ಒಡೆಯರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.10ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ ಶೆಟ್ಟಿ ಹೇಳಿದರು.

‘ನಗರದ ಹೊಸ ಬಸ್ ನಿಲ್ದಾಣದ ಸಮೀಪ ಅಂದಾಜು ₹60 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು’ ಎಂದು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಕೆ.ಶೆಟ್ಟಿ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ನಗರಸಭೆ ಸದಸ್ಯೆ ಪದ್ಮಾ ಕಟಗಿ, ಗದಗ ಹೋಟೆಲ್ ಒಡೆಯರ ಸಂಘದ ಗೌರವಾಧ್ಯಕ್ಷ ಕೆ.ಸುಧಾಕರ ರಾವ್, ಜಿ.ರಾಜೀವ್ ಶೆಟ್ಟಿ ಉಪಸ್ಥಿತರಿರುವರು. ಹೋಟೆಲ್ ಒಡೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸುವರು’ ಎಂದು ತಿಳಿಸಿದರು.

‘ಹೋಟೆಲ್ ಒಡೆಯರ ಸಂಘವು ಗದಗ ನಗರದಲ್ಲಿ 45 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು, ಹೋಟೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಬಂದಿದೆ. ಇಷ್ಟು ವರ್ಷಗಳ ಅವಧಿಯಲ್ಲಿ ಅನೇಕ ಏಳು ಬೀಳುಗಳನ್ನು ಕಂಡಿದ್ದರೂ ಇಂದು ಸಂಘವು ತನ್ನದೇ ಸ್ವಂತ ಕಟ್ಟಡ ಹೊಂದುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕಟ್ಟಡ ನಿರ್ಮಾಣದ ಕನಸಿಗೆ ಅನೇಕರು ಕೈಜೋಡಿಸಿದ್ದು, ಅವರೆಲ್ಲರನ್ನೂ ಸ್ಮರಿಸುವೆ’ ಎಂದರು.

ಸಂಘದ ಪದಾಧಿಕಾರಿಗಳಾದ ಶಾನುಭಾಗ್, ಜಯದೇವ ಭಟ್, ದಿವಾಕರ್ ಶೆಟ್ಟಿ, ಪುರುಷೋತ್ತಮ್, ಜಯಪಾಲ್ ಶೆಟ್ಟಿ, ಸುಧಾಕರ ಶೆಟ್ಟಿ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-23-1729540373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.