ಗದಗ: ‘ನಗರದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕ್ಯಾಥ್ಲ್ಯಾಬ್ ಪ್ರಾರಂಭವಾದ ವರ್ಷದೊಳಗೆ 543ಕ್ಕೂ ಹೆಚ್ಚು ಜನರಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ’ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

‘ಈ ಪೈಕಿ 272ಕ್ಕೂ ಹೆಚ್ಚು ಆಂಜಿಯೋಪ್ಲಾಸ್ಟಿ (ಸ್ಟಂಟ್ ಅಳವಡಿಕೆ), 494ಕ್ಕೂ ಹೆಚ್ಚು ಆಂಜಿಯೋಗ್ರಾಫಿ, 13 ಪೇಸ್ ಮೇಕರ್ (ಕೃತಕ ಹೃದಯ ಮಿಡಿತ ಸಾಧನ ಅಳವಡಿಕೆ), 1 ಸಿಆರ್ಟಿ-ಡಿ, 1 ಎಸ್ಎಸ್ಡಿ ಡಿವೈಸ್ ಕ್ಲೋಸರ್ ಹಾಗೂ 2 ಐವಿಐ ಚಿಕಿತ್ಸೆ ನೀಡಲಾಗಿದೆ’ ಎಂದು ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗದಗದಲ್ಲಿ ಕ್ಯಾಥಲ್ಯಾಬ್ ಇಲ್ಲದ ಸಮಯದಲ್ಲಿ ಹೃದ್ರೋಗಿಗಳನ್ನು ಬೆಂಗಳೂರು, ಹುಬ್ಬಳ್ಳಿಗೆ ಕಳುಹಿಸಬೇಕಾದ ಅನಿವಾರ್ಯವಿತ್ತು. ಈಗ ಅಂತಹ ಕಷ್ಟ ತಪ್ಪಿದ್ದು, ತಂತ್ರಜ್ಞಾನಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಬೇಕಿದೆ’ ಎಂದರು.

‘ಇದೆಲ್ಲರ ಜತೆಗೆ ಈಗ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೇ ತೊಡೆಯ ಸಂಧಿನ ಮೂಲಕ ಟ್ರಾನ್ಸ್ ಕ್ಯಾಥೆಟರ್ ಎರೋಟಿಕ್ ವಾಲ್ಟ್ ಇಂಪ್ಲಾಂಟೇಷನ್ (ಟಿಎವಿಐ– ಟಾವಿ) ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ’ ಎಂದು ತಿಳಿಸಿದರು.

‘ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಹಲವು ವರ್ಷಗಳಿಂದ ತನ್ನ ಹಿರಿಮೆ ಹೆಚ್ಚಿಸುತ್ತ ಮಾದರಿಯಾಗುವಲ್ಲಿ ಕೆಲಸ ಮಾಡುತ್ತಿರುವ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಇದೀಗ ಟಾವಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ. ಈ ಮೂಲಕ ಜಯದೇವ ಆಸ್ಪತ್ರೆ ಹೊರತುಪಡಿಸಿ ಟಾವಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಗದಗ ಪಾತ್ರವಾಗಿದೆ’ ಎಂದು ಹೇಳಿದರು.

‘ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಮಾರ್ಗದರ್ಶನದಲ್ಲಿ ಹೃದ್ರೋಗ ತಜ್ಞ ಡಾ.ಸಂಜೀವ್ ಚಿಂತಾಮಣಿ ಸಹಕಾರದಲ್ಲಿ ಬೆಂಗಳೂರಿನ ಟಾವಿ ತಜ್ಞ ವೈದ್ಯ ಡಾ.ವಿಕ್ರಮ ಪಾಟೀಲ ನೇತೃತ್ವದ ವೈದ್ಯಕೀಯ ತಂಡ 68 ವರ್ಷದ ವ್ಯಕ್ತಿಗೆ ಸಂಕೀರ್ಣವಾದ ಹೈಬ್ರಿಡ್ ಟಾವಿ ವಿಧಾನದ ಮೂಲಕ ಯಶಸ್ವಿ ಹೃದಯ ಮಹಾಪಧಮನಿಯ ಕವಾಟ ಬದಲಾವಣೆ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ₹22 ಲಕ್ಷದಿಂದ ₹25 ಲಕ್ಷ ವೆಚ್ಚ ತಗಲುವ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗಿದೆ’ ಎಂದು ಹೇಳಿದರು.

ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಾ. ಸಂಜೀವ್ ಚಿಂತಾಮಣಿ, ಡಾ. ವಿನಾಯಕ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಸಿದ್ದು ಪಾಟೀಲ, ಎಡಿಸಿ ಡಾ. ದುರುಗೇಶ್ ಕೆ.ಆರ್. ಸೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-2074488867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.