ಗದಗ: ‘ದೇಶದಲ್ಲಿ ಕಾರ್ಮಿಕ ಕಲ್ಯಾಣ ಕಾನೂನುಗಳನ್ನು ಜಾರಿಗೆ ತರುವಲ್ಲಿ ಆಸ್ಕರ್ ಫರ್ನಾಂಡಿಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರವಾಗಿದೆ. ಅವರ ಪ್ರಯತ್ನದಿಂದಾಗಿ ಇಂದು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಲಭಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ಡಿ.ಸಿ.ಮಿಲ್ ಕಾಂಪೌಂಡ್ ಸಮೀಪದ ಕೆ.ಎಚ್.ಪಾಟೀಲ ನಗರದಲ್ಲಿ ಗದಗ ಬೆಟಗೇರಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾ ಸಂಘದಿಂದ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ದೇಶದ ಭವ್ಯ ಭವಿಷ್ಯ ನಿರ್ಮಿಸುವಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಅನನ್ಯವಾಗಿದೆ. ದಿನನಿತ್ಯ ಬೆವರು ಸುರಿಸಿ ದುಡಿಯುವ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಅವರಿಗೆ ಶ್ರೀರಕ್ಷೆಯಾಗಿವೆ’ ಎಂದರು.

‘ಕಟ್ಟಡ ಕಾರ್ಮಿಕ ಕಾರ್ಡ್ ಎಂಬುದು ಕೇವಲ ಚೀಟಿಯಲ್ಲ. ಅದು ಕಾರ್ಮಿಕರಿಗೆ ಒಂದು ಸರ್ಕಾರಿ ನೌಕರಿಯಷ್ಟೇ ಸಮಾನವಾದ ಭದ್ರತೆ ನೀಡುತ್ತದೆ. ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ಈ ಕಾರ್ಡ್ ಮೂಲಕ ವಿತರಿಸಲಾದ ಕಿಟ್ಗಳು ಮತ್ತು ಸಹಾಯಹಸ್ತ ದೊಡ್ಡ ನೆರವು ನೀಡಿದೆ’ ಎಂದು ಹೇಳಿದರು.

‘ಇನ್ನು ಯಾರಾದರೂ ಅರ್ಹ ಫಲಾನುಭವಿಗಳು ಕಾರ್ಮಿಕ ಕಾರ್ಡ್ನಿಂದ ವಂಚಿತರಾಗಿದ್ದರೆ, ಅಂತಹವರು ನಮ್ಮ ಗಮನಕ್ಕೆ ತಂದರೆ ಒಂದು ವಾರದೊಳಗೆ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ರಾಜ್ಯದಾದ್ಯಂತ ಇರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಕಿಟ್ಗಳನ್ನು ವಿತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ’ ಎಂದರು.

ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮಹಬೂಬ್ ಖಾನ್ ಪಠಾಣ್, ನಗರಸಭೆ ಸದಸ್ಯೆ ಕೃಷ್ಣ ಪರಾಪುರ ಸೇರಿದಂತೆ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-23-399900638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.