ಗದಗ: ‘ಲಿಂಗಾಯತ ಧರ್ಮವು ಮಾನವೀಯ ಮೌಲ್ಯಗಳನ್ನು ಹಾಗೂ ಸಮಾನತೆಯನ್ನು ಒಳಗೊಂಡಿದೆ. ಇಂಥ ಧರ್ಮವನ್ನು ಹಿಂದೂ ಸಮಾವೇಶದ ಹೆಸರಿನಲ್ಲಿ ಒಡೆಯುವ ಹುನ್ನಾರ ನಡೆಯುತ್ತಿದೆ’ ಎಂದು ಸಾಹಿತಿ ಬಸವರಾಜ ಸೂಳಿಭಾವಿ ಆರೋಪಿಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ‘ಸಮಾನತೆಯಾಗಿ ನಾವು ಸಂಘಟನೆ’ ಆಶ್ರಯದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ನಡೆದ ‘ವಚನ ಅರಿವಿನ ಮಹಾಯಾನ, ವಚನಗಳ ಸಾಮೂಹಿಕ ಪಠಣ ಹಾಗೂ ಸಂವಿಧಾನದ ಪೂರ್ವಪೀಠಿಕೆಯ ಸಮಾನತೆಯ ಉದ್ಘೋಷ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಗತ್ತಿಗೆ ಬೆಳಕಿನ ದಾರಿ ತೋರಿದವರು ಬುದ್ಧ. ಬಸವಣ್ಣನವರು ಲಿಂಗಾಯತ ಎನ್ನುವ ಸಮಾನತೆಯ ಧರ್ಮ ಕೊಟ್ಟರು. ಸ್ವಾತಂತ್ರ್ಯ ನಂತರ ಡಾ. ಬಿ. ಆರ್. ಅಂಬೇಡ್ಕರ್ ಅವರು, ಬುದ್ಧ ಮತ್ತು ಬಸವಣ್ಣನ ಆಶಯಗಳಿಗೆ ಕಾನೂನಾತ್ಮಕ ಚೌಕಟ್ಟು ರೂಪಿಸಿಕೊಟ್ಟು ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದರು. ಹೀಗಿದ್ದರೂ ಸಮಾನತೆಯ ವಿರುದ್ಧ ಇವತ್ತು ಮಾತುಗಳು ಕೇಳಿಬರುತ್ತಿವೆ. ಸಮಾನತೆ ವಿರೋಧಿಸುವವರೇ ನಿಜವಾದ ದೇಶದ್ರೋಹಿಗಳು’ ಎಂದು ಆರೋಪಿಸಿದರು.

‘ವಚನ ಸಾಹಿತ್ಯವು ಜಾತಿಗಳನ್ನು ಕಿತ್ತೊಗೆದು ಮನುಷ್ಯ ಪ್ರೀತಿಯ ಸಂದೇಶ ಸಾರಿದೆ. ಹೀಗಾಗಿ ಬುದ್ಧ, ಬಸವ, ಅಂಬೇಡ್ಕರ್ ಅವರ ಪರಂಪರೆಯ ಅರಿವು ಹೆಚ್ಚಿಸುವ ಕಾರ್ಯಕ್ರಮಗಳು ಹೆಚ್ಚು ನಡೆಯಲಿವೆ’ ಎಂದರು.

ಕಾರ್ಯಕ್ರಮದಲ್ಲಿ ಬಸವಾದಿ ಶರಣರ ವಚನಗಳ ಸಾಮೂಹಿಕ ಪಠಣ ನಡೆಯಿತು. ಶರೀಫ್ ಬಿಳಿಯಲಿ ಹಾಗೂ ಸಂಗಡಿಗರು ವಚನಗೀತೆ ಹಾಡಿದರು.

ಅಶೋಕ ಬರಗುಂಡಿ, ಶೇಖಣ್ಣ ಕವಳಿಕಾಯಿ, ಶಿವಾನಂದ ತಮ್ಮಣ್ಣವರ, ಎಂ. ಎಸ್. ಹಡಪದ, ಗೌರಕ್ಕ ಬಡಿಗಣ್ಣವರ, ಎಚ್.ಎಸ್. ಹಾಲಾಪುರ, ಮುತ್ತು ಬಿಳಿಯಲಿ, ಎಸ್. ಎನ್. ಬಳ್ಳಾರಿ, ಮಲ್ಲಿಕಾರ್ಜುನ ವಿಂಡಮ್ಮನವರ, ನವಲಗುಂದ, ಎ.ಕೆ. ಮುಲ್ಲಾನವರ, ಪಾಲಾಕ್ಷಿ ಗದಡನ್ನಿ ಮುತ್ತು ವಾಲ್ಮೀಕಿ, ರಾಮಚಂದ್ರ ಹಂಸನೂರ, ಶರೀಫ್ ಬಿಳಿಯಲಿ, ಪರಶು ಕಾಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-23-1773505334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.