ಲಕ್ಷ್ಮೇಶ್ವರ: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅಧಿಕಾರಿಗಳು ತಮ್ಮ ಕಚೇರಿಯಲ್ಲಿನ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಿಜಯಕುಮಾರ ಬಿರಾದರ ಹೇಳಿದರು.

ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಬುಧವಾರ ನಡೆದ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕನಿಷ್ಠ 5 ಗಂಟೆಯಾದರೂ ಕೆಲಸ ಮಾಡಬೇಕು. ಕಚೇರಿಯ ವೇಳೆಗೆ ಅಧಿಕಾರಿಗಳು ಸರಿಯಾಗಿ ಬರುವುದನ್ನು ರೂಢಿಸಿಕೊಳ್ಳಬೇಕು. ತಮ್ಮ ಕೈಕೆಳಗಿನ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುವಂತೆ ನೋಡಿಕೊಳ್ಳಬೇಕು ಎಂದರು.

ಅಧಿಕಾರಿಗಳು ಸಾರ್ವಜನಿಕರು ತಂದ ಅರ್ಜಿಯನ್ನು ತೆಗೆದು ಕೊಂಡು ಅದಕ್ಕೆ ಹಿಂಬರಹ ನೀಡಬೇಕು. ಆದರಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಕಂದಾಯ ಇಲಾಖೆಯ ಅಧಿಕಾರಿಗಳು ಏನು ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳು ವಿನಾಕಾರಣ ಯಾರಿಗೂ ತೊಂದರೆ ಕೊಡುವ ಕಾರ್ಯ ಮಾಡಬೇಡಿ, ಲಕ್ಷ್ಮೇಶ್ವರ ಪಟ್ಟಣದಲ್ಲಿ ತಿಂಗಳಿಗೊಮ್ಮೆ ಕುಡಿಯುವ ನೀರು ಬರುತ್ತಿದ್ದು. ನೀರಿನ ತೆರಿಗೆ ಕಟ್ಟಿದ್ದರೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿರಿ ಎಂದು ಹೇಳಿದರು.

ಈ ವೇಳೆ ಒಟ್ಟು 16 ಜನರ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಗುಡದಾರಿ, ತಾಲ್ಲೂಕು ಪಂಚಾಯಿತಿ ಇಒ ಮಂಜುಳಾ ಹಕಾರಿ, ಗ್ರೇಡ್ -2 ತಹಶೀಲ್ದಾರ್ ಮಂಜುನಾಥ್ ಅಮಾಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-23-228328700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.