ಗದಗ: ಮಾದಿಗ ಸಮಾಜದ ನಾಯಕರಾದ ಕೆ. ಎಚ್. ಮುನಿಯಪ್ಪ, ಎಚ್.ಆಂಜನೇಯ ಅವರಿಗೆ ರಾಜ್ಯ ಸರ್ಕಾರದ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಮಾದಿಗ ಮಹಾಸಭಾ ಮುಖಂಡರು ಆಗ್ರಹಿಸಿದರು.

’ಈ ನಾಯಕರು ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ ಪಕ್ಷಕ್ಕಾಗಿ ದುಡಿದ್ದಾರೆ. ದಲಿತ ಮೀಸಲಾತಿ ಮತ್ತು ಸಮುದಾಯಗಳ ಹಕ್ಕುಗಳ ಪರವಾಗಿ ಧ್ವನಿ ಎತ್ತುತ್ತಾ ಬಂದಿರುತ್ತಾರೆ. ಎಚ್. ಆಂಜನೇಯ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವುದರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ಮಾಡಬೇಕು. ಕೆ. ಎಚ್. ಮುನಿಯಪ್ಪ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು’ ಎಂದು ಗದಗ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆ ಮೂಲಕ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ಉಪಾಧ್ಯಕ್ಷ ಮೋಹನ ಎಸ್. ಆಲಮೇಲಕರ, ಎಚ್. ಡಿ. ಪೂಜಾರ, ಡಿ. ಜಿ. ಪೂಜಾರ, ಮರಿಯಪ್ಪ ಸಿದ್ದಣ್ಣನವರ, ಸತೀಶ ಪಾಸಿ, ಲಕ್ಷ್ಮಣ ದೊಡ್ಮನಿ, ಲಕ್ಷ್ಮಣ ಮಾದರ, ಶಿವಾನಂದ ಅಳವಂಡಿ, ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-1254561571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.