ಗದಗ: ‘ಜಲವೇ ಜೀವನ ಎಂಬ ತತ್ವಕ್ಕೆ ಸಾಕ್ಷಿಯಾಗಿ, ಸಕಲ ಜೀವರಾಶಿಗಳ ಉದ್ಧಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಲೋಕಕಲ್ಯಾಣಕ್ಕಾಗಿ ಅಸಾಧ್ಯವಾದುದನ್ನು ಸಾಧಿಸಿದ ಮಹಾನ್ ಪುರುಷ ಮಹರ್ಷಿ ಭಗೀರಥ’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಮಹರ್ಷಿ ಭಗೀರಥ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

‘ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದಾದರೆ, ಅಸಾಧ್ಯವಾದುದನ್ನು ಸಾಧ್ಯವಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂಬ ಪಾಠವನ್ನು ಭಗೀರಥರ ಜೀವನದಿಂದ ಕಲಿಯಬೇಕಿದೆ. ಅವರ ದಿಟ್ಟ ನಿರ್ಧಾರ ಮತ್ತು ಕಠಿಣ ಪ್ರಯತ್ನವು ಇಂದಿನ ಸಮಾಜಕ್ಕೆ ದೊಡ್ಡ ಪ್ರೇರಣೆಯಾಗಿದೆ’ ಎಂದು ಹೇಳಿದರು.

ಮಂಜುನಾಥ ಹುಯಿಲಗೋಳ ಮಹರ್ಷಿ ಭಗೀರಥರ ಬಗ್ಗೆ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಬರಹಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜು ಸೊಪಡ್ಲ, ಬಿ.ಎಫ್.ಉಪ್ಪಾರ, ಪ್ರಧಾನ ಕಾರ್ಯದರ್ಶಿ ರಾಜು ಗಡ್ಡಿ, ಮರ್ಹಷಿ ಭಗೀರಥ ಉಪ್ಪಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭೀಮನಗೌಡ ಪಾಟೀಲ, ಸಮಾಜ ಮುಖಂಡರು ಹನುಮಂತಪ್ಪ ಗರಗ, ಚನ್ನಬಸವ್ವ ಸಾವಕ್ಕನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-23-598168622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.