ಗದಗ: ‘ಜಿಲ್ಲೆಯಲ್ಲಿ ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗುವವರ ಮೇಲೆ ಕಾನೂನು ರೀತಿಯಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಜರುಗಿದ 2025-26ನೇ ಸಾಲಿನ 4ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಟ್ಕಾ ಪ್ರಕರಣಗಳಲ್ಲಿ ಬಾಕಿ ಇರುವ ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್ಟಿ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದು, ಗಡಿಪಾರು ಮಾಡಿರುವ ಆರೋಪಿತರ ಆರ್ಥಿಕ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ತಮ್ಮ ಕಾರ್ಯ ವ್ಯಾಪ್ತಿಯಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಡಿವೈಎಸ್ಪಿ ಮಹಾಂತೇಶ ಸಜ್ಜನ ಮಾತನಾಡಿ, ‘ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಡಂಬಳದ ಬಸವರಾಜ ಮೈಲಪ್ಪ ದೊಡ್ಡಮನಿ ಇವರನ್ನು ವಿಜಯನಗರ ಜಿಲ್ಲೆ ಕೂಡ್ಲಿಗಿ ಪೋಲೀಸ್ ಠಾಣೆಗೆ ಮತ್ತು ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ವಿರುಪಾಕ್ಷಪ್ಪ ಶಂಕ್ರಪ್ಪ ಸಂಗಪ್ಪ ಶೆಟ್ಟರ ಇವರನ್ನು ವಿಜಯನಗರ ಜಿಲ್ಲೆ ಕೊಟ್ಟೂರು ಪೊಲೀಸ್ ಠಾಣೆಗೆ ಗಡಿಪಾರು ಮಾಡಿ ಆದೇಶಿಸಿರುವ ಬಗ್ಗೆ ಮಾಹಿತಿ ನೀಡಿದರು.

‘3ಕ್ಕಿಂತ ಹೆಚ್ಚು ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರನ್ನು ಗಡಿಪಾರು ಶಿಕ್ಷೆಗೆ ಒಳಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಟ್ಕಾ ಪ್ರಕರಣಗಳು ಇಳಿಮುಖಆಗುತ್ತಿವೆ’ ಎಂದು ತಿಳಿಸಿದರು.

ಸಭೆಯಲ್ಲಿ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ–ಋಣ ನಿರ್ವಹಣೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರ ಚಿನಗುಂಡಿ, ಅಭಿವೃದ್ಧಿ ಅಧಿಕಾರಿ ನಾಗರಾಜ ಉಪ್ಪಾರ, ವಾಣಿಜ್ಯ ತೆರಿಗೆ ಇಲಾಖೆಯ ರಾಜಶೇಖರಯ್ಯ ಕಾಲವಾಡಮಠ, ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-170691994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.